ಆದಿಕಾಂಡ 40:15 - ಕನ್ನಡ ಸತ್ಯವೇದವು J.V. (BSI)15 ನಾನು ಇಬ್ರಿಯದೇಶಸ್ಥನು; ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನೇನೂ ತಪ್ಪಿಲ್ಲದವನಾಗಿ ಸೆರೆಯಲ್ಲಿ ಬಿದ್ದೆನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾನು ಹಿಬ್ರಿಯ ದೇಶದವನು. ಕೆಲವರು ನನ್ನನ್ನು ಗುಲಾಮನನ್ನಾಗಿ ಈ ದೇಶಕ್ಕೆ ಹಿಡಿದುತಂದರು. ಇಲ್ಲಿಯೂ ಸೆರೆಗೆ ಗುರಿಯಾಗಿಸುವಂಥ ದ್ರೋಹವನ್ನು ನಾನೇನು ಮಾಡಿಲ್ಲ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಏಕೆಂದರೆ ನನ್ನನ್ನು ಹಿಬ್ರಿಯರ ದೇಶದೊಳಗಿಂದ ಹಿಡಿದು ತಂದಿದ್ದಾರೆ. ಇಲ್ಲಿಯೂ ಸಹ ನಾನು ಏನೂ ತಪ್ಪುಮಾಡದೆ ಇದ್ದರೂ ನನ್ನನ್ನು ಸೆರೆಯಲ್ಲಿ ಹಾಕಿದರು,” ಎಂದನು. ಅಧ್ಯಾಯವನ್ನು ನೋಡಿ |