Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:2 - ಕನ್ನಡ ಸತ್ಯವೇದವು J.V. (BSI)

2 ತಮ್ಮ ದಣಿಗೆ ವಿರೋಧವಾಗಿ ಯಾವದೋ ತಪ್ಪುಮಾಡಿದ್ದರಿಂದ ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಭಕ್ಷ್ಯಕಾರರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಫರೋಹನು ಆ ಇಬ್ಬರು ನೌಕರರ ಮೇಲೆ, ಅಂದರೆ ಪಾನಸೇವಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆಭಟ್ಟರ ಮುಖ್ಯಸ್ಥನ ಮೇಲೆಯೂ ಕೋಪಗೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಫರೋಹನು ತನ್ನ ಭಕ್ಷ್ಯಗಾರನ ಮೇಲೆಯೂ ಪಾನದಾಯಕನ ಮೇಲೆಯೂ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ, ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:2
11 ತಿಳಿವುಗಳ ಹೋಲಿಕೆ  

ಭೂಪನ ಕೋಪ ಮೃತ್ಯುವಿನ ದೂತ; ಜಾಣನು ಅದನ್ನು ಶಮನಪಡಿಸುವನು.


ತೂರ್ ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವದನ್ನು ನೋಡಿ ಒಂದೇ ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಬೇಕೆಂದು ಅರಸನನ್ನು ಬೇಡಿಕೊಂಡರು. ಯಾಕಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.


ಕೋಪವು ಕ್ರೂರ, ಕ್ರೋಧವು ಪ್ರವಾಹ; ಮಾತ್ಸರ್ಯಕ್ಕೆ ಎದುರಾಗಿ ಯಾರು ನಿಂತಾರು?


ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ; ಬಿಡಿಸಿದರೆ ಬಾರಿಬಾರಿಗೆ ಬಿಡಿಸಬೇಕಾಗುವದು.


ರಾಜನ ರೋಷವು ಸಿಂಹದ ಗರ್ಜನೆ; ಅವನ ದಯೆಯು ಪೈರಿನ ಇಬ್ಬನಿ.


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ದ್ರಾಕ್ಷೇತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷೇ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ,


ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಕ ಕೊಡುವವನೂ ಭಕ್ಷ್ಯಗಳನ್ನು ಮಾಡಿಕೊಡುವವನೂ


ಪಾನದಾಯಕರ ಮುಖ್ಯಸ್ಥನನ್ನು ತಿರಿಗಿ ಅವನ ಉದ್ಯೋಗಕ್ಕೆ ನೇವಿುಸಿದನು; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು;


ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡದೆ ಮರೆತುಬಿಟ್ಟನು.


ತಾವು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ ಭಕ್ಷ್ಯಕಾರರಲ್ಲಿ ಮುಖ್ಯಸ್ಥನನ್ನೂ ದಳವಾಯಿಯ ಮನೆಯೊಳಗೆ ಕಾವಲಲ್ಲಿರಿಸಿದಾಗ ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು