Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:21 - ಕನ್ನಡ ಸತ್ಯವೇದವು J.V. (BSI)

21 ಪಾನದಾಯಕರ ಮುಖ್ಯಸ್ಥನನ್ನು ತಿರಿಗಿ ಅವನ ಉದ್ಯೋಗಕ್ಕೆ ನೇವಿುಸಿದನು; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪಾನಸೇವಕರ ಮುಖ್ಯಸ್ಥನನ್ನು ಪುನಃ ಅವನ ನೌಕರಿಗೆ ಏರಿಸಿದ; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸುವಂಥವನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಫರೋಹನು ಪಾನದಾಯಕನನ್ನು ಮತ್ತೆ ಅದೇ ಕೆಲಸಕ್ಕೆ ನೇಮಿಸಿದನು; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮುಖ್ಯ ಪಾನದಾಯಕನನ್ನು ತಿರುಗಿ ಉದ್ಯೋಗದಲ್ಲಿ ಇರಿಸಿದ್ದರಿಂದ, ಮತ್ತೆ ಅವನು ಫರೋಹನ ಕೈಗೆ ಪಾನಪಾತ್ರೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:21
6 ತಿಳಿವುಗಳ ಹೋಲಿಕೆ  

ಆ ಮೂರು ಕೊಂಬೆಗಳೇ ಮೂರು ದಿನಗಳು; ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ ನಿನ್ನ ಉದ್ಯೋಗಕ್ಕೆ ತಿರಿಗಿ ನೇವಿುಸುವನು. ನೀನು ಮುಂಚೆ ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.


ನಾನು ಅರಸನ ಪಾನಸೇವಕನಾಗಿದ್ದೆನು. ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರುಷದ ಚೈತ್ರಮಾಸದಲ್ಲಿ ಅರಸನು ದ್ರಾಕ್ಷಾರಸಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.


ತಮ್ಮ ದಣಿಗೆ ವಿರೋಧವಾಗಿ ಯಾವದೋ ತಪ್ಪುಮಾಡಿದ್ದರಿಂದ ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಭಕ್ಷ್ಯಕಾರರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಮಾಡಿ


ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು; ಅವನು ಹೇಳಿದಂತೆಯೇ ನನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.


ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.


ಅವನು ತನ್ನ ಮಾತು ನೆರವೇರುವ ತನಕ ಯೆಹೋವನ ವಾಕ್ಯದಿಂದ ಶೋಧಿತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು