ಆದಿಕಾಂಡ 40:5 - ಕನ್ನಡ ಸತ್ಯವೇದವು J.V. (BSI)5 ಹೀಗೆ ಅವರು ಕೆಲವು ಕಾಲ ಕಾವಲಲ್ಲಿದ್ದ ಮೇಲೆ ಅವರಿಬ್ಬರಿಗೂ, ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ಭಕ್ಷ್ಯಕಾರನಿಗೂ, ಒಂದೇ ರಾತ್ರಿ ಕನಸುಬಿತ್ತು; ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕೆಲವು ಕಾಲವದ ಮೇಲೆ, ಆ ಇಬ್ಬರು ನೌಕರರಿಗೂ ಅಂದರೆ, ಈಜಿಪ್ಟಿನ ಅರಸ ಸೆರೆಗೆ ಹಾಕಿಸಿದ್ದ ಪಾನಸೇವಕನಿಗೂ ಅಡಿಗೆಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರ ಕನಸುಗಳಿಗೆ ಬೇರೆಬೇರೆ ಅರ್ಥವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಒಂದು ರಾತ್ರಿ ಆ ಇಬ್ಬರು ಕೈದಿಗಳಿಗೆ ಅಂದರೆ ಭಕ್ಷ್ಯಗಾರನಿಗೂ ಪಾನದಾಯಕನಿಗೂ ಒಂದೊಂದು ಕನಸು ಬಿತ್ತು. ಮತ್ತು ಅವರಿಬ್ಬರ ಕನಸುಗಳು ತಮ್ಮದೇ ಆದ ಅರ್ಥವನ್ನು ಹೊಂದಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರಿಬ್ಬರಿಗೂ ಅಂದರೆ, ಈಜಿಪ್ಟ್ ದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ರೊಟ್ಟಿಗಾರನಿಗೂ ಒಂದೇ ರಾತ್ರಿ ಕನಸು ಬಿತ್ತು. ಅವರವರ ಕನಸಿಗೆ ಅದರದೇ ಆದ ಅರ್ಥವಿತ್ತು. ಅಧ್ಯಾಯವನ್ನು ನೋಡಿ |
ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!