Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:6 - ಕನ್ನಡ ಸತ್ಯವೇದವು J.V. (BSI)

6 ಬೆಳಿಗ್ಗೆ ಯೋಸೇಫನು ಅವರ ಬಳಿಗೆ ಬಂದಾಗ ಅವರು ಚಿಂತೆಯುಳ್ಳವರಾಗಿ ಕಾಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬೆಳಿಗ್ಗೆ ಯೋಸೇಫನು ಅವರ ಬಳಿಗೆ ಬಂದಾಗ ಅವರು ಬಹು ಚಿಂತೆಯುಳ್ಳವರಾಗಿ ಕಾಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬೆಳಿಗ್ಗೆ ಜೋಸೆಫನು ಅವರ ಬಳಿಗೆ ಬಂದಾಗ ಚಿಂತಾಕ್ರಾಂತರಾಗಿರುವುದು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮರುದಿನ ಮುಂಜಾನೆ ಯೋಸೇಫನು ಅವರ ಬಳಿಗೆ ಹೋದನು. ಅವರಿಬ್ಬರು ಚಿಂತೆಯಿಂದ ಇರುವುದನ್ನು ಯೋಸೇಫನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ, ಅವರು ಚಿಂತೆಯುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:6
9 ತಿಳಿವುಗಳ ಹೋಲಿಕೆ  

ಆಗ ದಾನಿಯೇಲನಾದ ನಾನು ಬೆಂಡಾಗಿ ಕೆಲವು ದಿವಸ ಕಾಯಿಲೆಬಿದ್ದೆನು; ಆಮೇಲೆ ಎದ್ದು ರಾಜಕಾರ್ಯವನ್ನು ನಡಿಸಿದೆನು; ಆ ಕನಸಿಗೆ ಬೆಚ್ಚಿಬೆರಗಾದೆನು; ಅದು ಯಾರಿಗೂ ತಿಳಿಯಲಿಲ್ಲ.


ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡು ಮೊಗಗೆಟ್ಟೆನು; ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆನು.


ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಲಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.


ಬೆಳಿಗ್ಗೆ ಅವನು ಮನದಲ್ಲಿ ಕಳವಳಗೊಂಡು ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ ವಿದ್ವಾಂಸರನ್ನೂ ಕರಸಿ ಅವರಿಗೆ ತನ್ನ ಕನಸನ್ನು ತಿಳಿಸಲಾಗಿ ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಅವರಲ್ಲಿ ಒಬ್ಬರೂ ಸಿಕ್ಕಲಿಲ್ಲ.


ಅವರು ಅವನಿಗೆ - ನಮಗೆ ಸ್ವಪ್ನಬಿತ್ತು; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ ಎಂದು ಹೇಳಲು ಯೋಸೇಫನು ಅವರಿಗೆ - ಸ್ವಪ್ನಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ; ದಯಮಾಡಿ ನಿಮ್ಮ ಸ್ವಪ್ನವನ್ನು ನನಗೆ ತಿಳಿಸಿರಿ ಎಂದು ಹೇಳಿದನು.


ಹೀಗೆ ಅವರು ಕೆಲವು ಕಾಲ ಕಾವಲಲ್ಲಿದ್ದ ಮೇಲೆ ಅವರಿಬ್ಬರಿಗೂ, ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ಭಕ್ಷ್ಯಕಾರನಿಗೂ, ಒಂದೇ ರಾತ್ರಿ ಕನಸುಬಿತ್ತು; ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.


ಅದನ್ನು ಅವನು ನೋಡಿ - ನಿಮ್ಮ ಮುಖವು ಈ ಹೊತ್ತು ಯಾಕೆ ಕಳೆಗುಂದಿತು ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು