ಆದಿಕಾಂಡ 40:7 - ಕನ್ನಡ ಸತ್ಯವೇದವು J.V. (BSI)7 ಅದನ್ನು ಅವನು ನೋಡಿ - ನಿಮ್ಮ ಮುಖವು ಈ ಹೊತ್ತು ಯಾಕೆ ಕಳೆಗುಂದಿತು ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದನ್ನು ಅವನು ನೋಡಿ, “ನಿಮ್ಮ ಮುಖವು ಈ ಹೊತ್ತು ಏಕೆ ಕಳೆಗುಂದಿದೆ?” ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದನ್ನು ಗಮನಿಸಿದ ಜೋಸೆಫನು, “ಈ ದಿನ ನಿಮ್ಮ ಮುಖ ಕಳೆಗುಂದಿದೆ ಏಕೆ?” ಎಂದು ತನ್ನೊಂದಿಗೆ ಸೆರೆಯಲ್ಲಿದ್ದ ಆ ನೌಕರರನ್ನು ಕೇಳಿದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಈ ದಿನ ನೀವು ತುಂಬ ಚಿಂತೆಯಿಂದ ಇರುವಂತೆ ಕಾಣುತ್ತಿದೆ, ಕಾರಣವೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು, “ನಿಮ್ಮ ಮುಖಗಳು ಇಂದು ಚಿಂತೆಗೊಂಡಿರುವುದು ಏಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |