Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:1 - ಕನ್ನಡ ಸತ್ಯವೇದವು J.V. (BSI)

1 ಎರಡು ವರುಷಗಳಾದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸು ಏನಂದರೆ - ಅವನು ನೈಲ್‍ನದೀತೀರದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎರಡು ವರ್ಷಗಳಾದ ಮೇಲೆ ಫರೋಹನಿಗೆ ಒಂದು ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎರಡು ವರ್ಷಗಳ ನಂತರ ಫರೋಹನಿಗೆ ಒಂದು ಕನಸಾಯಿತು. ಫರೋಹನು ಕನಸಿನಲ್ಲಿ ನೈಲ್ ನದಿಯ ತೀರದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎರಡು ಪೂರ್ಣ ವರ್ಷಗಳು ಕಳೆದ ಮೇಲೆ ಫರೋಹನು ಒಂದು ಕನಸನ್ನು ಕಂಡನು. ಆ ಕನಸಿನಲ್ಲಿ ಅವನು ನೈಲ್ ನದಿಯ ಬಳಿಯಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:1
21 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ನ್ಯಾಯಾಸನದಲ್ಲಿ ಕೂತಿರುವಾಗ ಅವನ ಹೆಂಡತಿಯು - ನೀನು ಆ ಸತ್ಪುರುಷನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು ಎಂದು ಅವನ ಬಳಿಗೆ ಹೇಳಿ ಕಳುಹಿಸಿದಳು.


ಫರೋಹನು - ಈ ನದಿಯು ನನ್ನದೇ, ನಾನೇ ಮಾಡಿಕೊಂಡದು ಅಂದುಕೊಂಡ ಕಾರಣ ಐಗುಪ್ತದೇಶವು ಹಾಳುಪಾಳಾಗುವದು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಮಹಾನದಿಯ ನೀರು ಬತ್ತಿಹೋಗುವದು.


ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆ ಬರಲಿಲ್ಲ; ಆದದರಿಂದ ಸ್ಮರಿಸತಕ್ಕ ಪೂರ್ವವೃತ್ತಾಂತಗಳ ಗ್ರಂಥವನ್ನು ಅವನು ತರಿಸಿ ಪಾರಾಯಣಮಾಡಿಸುತ್ತಿರುವಾಗ


ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.


ಈ ಎರಡು ಮಹತ್ಕಾರ್ಯಗಳನ್ನೂ ಅವರು ಮನಸ್ಸಿಗೆ ತೆಗೆದುಕೊಳ್ಳದೆಯೂ ನಿನ್ನ ಮಾತನ್ನು ನಂಬದೆಯೂ ಹೋದರೆ, ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣಗಿದ ನೆಲದಲ್ಲಿ ಸುರಿಯಬೇಕು; ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವದು ಎಂದು ಹೇಳಿದನು.


ತರುವಾಯ ಫರೋಹನು ತನ್ನ ಜನರಿಗೆಲ್ಲಾ - [ಇಬ್ರಿಯರ] ಗಂಡುಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು ಎಂದು ಆಜ್ಞೆ ಮಾಡಿದನು.


ಹೀಗೆ ಅವರು ಕೆಲವು ಕಾಲ ಕಾವಲಲ್ಲಿದ್ದ ಮೇಲೆ ಅವರಿಬ್ಬರಿಗೂ, ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ಭಕ್ಷ್ಯಕಾರನಿಗೂ, ಒಂದೇ ರಾತ್ರಿ ಕನಸುಬಿತ್ತು; ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.


ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಓಡಿಹೋಗಿ ಯೂಫ್ರೇಟೀಸ್ ಮಹಾನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.


ಲಾಬಾನನು ಅವನಿಗೆ - ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದೀ ಎಂದು ಹೇಳಿದನು. ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು.


ಆದರೆ ರಾತ್ರಿಯಲ್ಲಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು - ನೀನು ಆ ಸ್ತ್ರೀಯನ್ನು ಸೇರಿಸಿಕೊಂಡದರಿಂದ ಸಾಯತಕ್ಕವನಾಗಿದ್ದಿ; ಆಕೆ ಮುತ್ತೈದೆ ಅಂದನು.


ಆ ರಾತ್ರಿ ಅವನು ಕನಸುಕಂಡನು. ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೇಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು; ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.


ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡದೆ ಮರೆತುಬಿಟ್ಟನು.


ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನದಿಯೊಳಗಿಂದ ಬಂದು ಆಪುಹುಲ್ಲಿನಲ್ಲಿ ಮೇಯುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು