ಆದಿಕಾಂಡ 41:14 - ಕನ್ನಡ ಸತ್ಯವೇದವು J.V. (BSI)14 ಫರೋಹನು ಇದನ್ನು ಕೇಳಿ ಯೋಸೇಫನನ್ನು ಕರೇ ಕಳುಹಿಸಿದನು. ಯೋಸೇಫನು ಬೇಗನೆ ಸೆರೆಮನೆಯಿಂದ ಬಿಡಿಸಲ್ಪಟ್ಟವನಾಗಿ ಕ್ಷೌರಮಾಡಿಸಿಕೊಂಡು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಫರೋಹನ ಸನ್ನಿಧಿಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇದನ್ನು ಕೇಳಿದ ಫರೋಹನು ಜೋಸೆಫನನ್ನು ಕರೆತರುವಂತೆ ಆಳುಗಳನ್ನು ಕಳಿಸಿದ. ಅವರು ಬಂದು ಅವನನ್ನು ಸೆರೆಯಿಂದ ತ್ವರೆಯಾಗಿ ಬಿಡುಗಡೆ ಮಾಡಿದರು. ಜೋಸೆಫನು ಕ್ಷೌರಮಾಡಿಕೊಂಡು, ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಯಲ್ಲಿ ಹಾಜರಾದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಫರೋಹನು ಯೋಸೇಫನನ್ನು ಸೆರೆಮನೆಯಿಂದ ಕರೆಸಿದನು. ಯೋಸೇಫನು ಕ್ಷೌರಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಹಾಕಿಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಫರೋಹನು ಯೋಸೇಫನನ್ನು ಕರೆತರುವಂತೆ ಸೇವಕರನ್ನು ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು. ಅಧ್ಯಾಯವನ್ನು ನೋಡಿ |