Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:26 - ಕನ್ನಡ ಸತ್ಯವೇದವು J.V. (BSI)

26 ಆ ಏಳು ಒಳ್ಳೆಯ ಆಕಳುಗಳೇ ಆ ಏಳು ವರುಷಗಳು; ಏಳು ಒಳ್ಳೆಯ ತೆನೆಗಳೂ ಏಳು ವರುಷಗಳು; ಎರಡು ಕನಸುಗಳ ಅರ್ಥವೊಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ಏಳು ಒಳ್ಳೆಯ ಹಸುಗಳೇ ಏಳು ವರ್ಷಗಳು; ಆ ಏಳು ಒಳ್ಳೆಯತೆನೆಗಳೂ ಏಳು ವರ್ಷಗಳು; ಎರಡು ಕನಸುಗಳ ಅರ್ಥ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಒಳ್ಳೆಯ ಏಳು ಹಸುಗಳೇ ಏಳು ವರ್ಷಗಳು. ಒಳ್ಳೆಯ ಏಳು ತೆನೆಗಳೇ ಏಳು ವರ್ಷಗಳು. ಎರಡು ಕನಸುಗಳೂ ಒಂದೇ ಅರ್ಥವನ್ನು ಹೊಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ಏಳು ಒಳ್ಳೆಯ ಹಸುಗಳು ಏಳು ವರ್ಷಗಳು; ಏಳು ಒಳ್ಳೆಯ ತೆನೆಗಳೂ, ಏಳು ವರ್ಷಗಳೇ. ಇವೆರಡು ಕನಸುಗಳ ಅರ್ಥ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:26
15 ತಿಳಿವುಗಳ ಹೋಲಿಕೆ  

ಸುಭಿಕ್ಷವಾದ ಏಳು ವರುಷಗಳಲ್ಲಿ ಭೂವಿುಯು ಹೇರಳವಾಗಿ ಫಲಕೊಟ್ಟಿತು.


ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನದಿಯೊಳಗಿಂದ ಬಂದು ಆಪುಹುಲ್ಲಿನಲ್ಲಿ ಮೇಯುತ್ತಿದ್ದವು.


ಇದಲ್ಲದೆ ಆತ್ಮನು ಸಾಕ್ಷಿ ಕೊಡುವವನಾಗಿದ್ದಾನೆ; ಆತ್ಮನು ಸತ್ಯಸ್ವರೂಪನೇ.


ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು; ಹೇಗಂದರೆ ಅವರ ಹಿಂದೆ ಹೋಗುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು; ಆ ಬಂಡೆ ಕ್ರಿಸ್ತನೇ.


ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗಂದರೆ - ನೀವು ನಡುವನ್ನು ಕಟ್ಟಿ ಕೆರವನ್ನು ಮೆಟ್ಟಿಕೊಂಡು ಕೋಲು ಹಿಡಿದು ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.


ಐಗುಪ್ತದೇಶದಲ್ಲಿ ಸುಭಿಕ್ಷದ ಏಳು ವರುಷಗಳು ಮುಗಿದ ಮೇಲೆ


ಕೇಳಯ್ಯಾ, ಐಗುಪ್ತದೇಶದಲ್ಲೆಲ್ಲಾ ಬಹುವಿಶೇಷವಾದ


ಅವನು ತಿರಿಗಿ ನಿದ್ರೆಮಾಡಿದಾಗ ಮತ್ತೊಂದು ಕನಸುಬಿತ್ತು. ಅದೇನಂದರೆ - ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.


ಅದಕ್ಕೆ ಯೋಸೇಫನು - ನಿನ್ನ ಕನಸಿನ ಅರ್ಥವೇನಂದರೆ - ಆ ಮೂರು ಪುಟ್ಟಿಗಳೇ ಮೂರು ದಿನಗಳು;


ಅದಕ್ಕೆ ಯೋಸೇಫನು - ಆ ಕನಸಿನ ಅರ್ಥವೇನಂದರೆ -


ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರು ಒಂದೇ ಶರೀರವಾಗಿರುವರು.


ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಬೇಕು; ಹೀಗೆ ಒಂದೇ ಗುಡಾರವಾಗುವದು.


ಯೋಸೇಫನು ಫರೋಹನಿಗೆ - ತಾವು ಕಂಡ ಎರಡು ಕನಸುಗಳೂ ಒಂದೇ ವಿಷಯವಾದವುಗಳು. ದೇವರು ತಾನು ಮಾಡಬೇಕೆಂದಿರುವದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.


ಒಳ್ಳೇ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಆ ಬಡ ಆಕಳುಗಳೂ ಮೂಡಣ ಗಾಳಿಯಿಂದ ಕೆಟ್ಟುಹೋಗಿದ್ದ ಆ ಏಳು ಕಾಳಿಲ್ಲದ ತೆನೆಗಳೂ ಬರವುಂಟಾಗುವ ಏಳು ವರುಷಗಳನ್ನು ಸೂಚಿಸುತ್ತವೆ.


[ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ ತಾಮ್ರ ಮಣ್ಣು ಬೆಳ್ಳಿ ಬಂಗಾರಗಳನ್ನು ಚೂರುಚೂರುಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ; ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ; ಕನಸು ನಿಜ, ಅದರ ಅರ್ಥವು ನಂಬತಕ್ಕದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು