ಆದಿಕಾಂಡ 41:32 - ಕನ್ನಡ ಸತ್ಯವೇದವು J.V. (BSI)32 ಫರೋಹನಿಗೆ ಕನಸು ಎರಡು ವಿಧವಾಗಿ ಬಿದ್ದದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನೆಂಬದಾಗಿ ತಿಳುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ದೇವರು ಈ ಕಾರ್ಯವನ್ನು ನಿರ್ಧರಿಸಿದ್ದಾರೆ; ಇದು ಬೇಗ ಬರಲಿದೆಯೆಂದು ತಿಳಿದುಕೊಳ್ಳಬೇಕು. ಏಕೆಂದರೆ ನಿಮಗೆ ಇಮ್ಮಡಿ ಕನಸುಬಿದ್ದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಫರೋಹನೇ, ಒಂದೇ ವಿಷಯದ ಮೇಲೆ ಎರಡು ಕನಸುಗಳಾಗಿರುವುದರಿಂದ ದೇವರು ಇದನ್ನು ನಿಶ್ಚಯವಾಗಿಯೂ ಬೇಗನೆ ಬರಮಾಡಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದುದರಿಂದ, ಆ ಕಾರ್ಯವು ದೇವರಿಂದ ಸ್ಥಿರಪಡಿಸಲಾಗಿದೆ. ಆದ್ದರಿಂದ ದೇವರು ಅದನ್ನು ಬೇಗನೆ ನೆರವೇರಿಸುವರು. ಅಧ್ಯಾಯವನ್ನು ನೋಡಿ |