Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:4 - ಕನ್ನಡ ಸತ್ಯವೇದವು J.V. (BSI)

4 ಮೈಯೊಣಗಿದ ಈ ಬಡ ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದುಬಿಟ್ಟವು. ಹೀಗೆ ಕಾಣಿಸುವಷ್ಟರಲ್ಲಿ ಫರೋಹನಿಗೆ ಎಚ್ಚರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವಲಕ್ಷಣವಾದ ಈ ಬಡ ಏಳು ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಒಣಕಲಾದ ಈ ಬಡ ಹಸುಗಳು ಅಚ್ಚುಕಟ್ಟಾದ ಆ ಕೊಬ್ಬಿದ ಹಸುಗಳನ್ನು ತಿಂದುಬಿಟ್ಟವು. ಅಷ್ಟರಲ್ಲಿ ಫರೋಹನಿಗೆ ಎಚ್ಚರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕುರೂಪವಾಗಿದ್ದ ಏಳು ಹಸುಗಳು ಲಕ್ಷಣವಾಗಿದ್ದ ಏಳು ಹಸುಗಳನ್ನು ತಿಂದುಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ಅವಲಕ್ಷಣವಾದ ಬಡಹಸುಗಳು, ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದುಬಿಟ್ಟವು. ಆಗ ಫರೋಹನು ಎಚ್ಚೆತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:4
4 ತಿಳಿವುಗಳ ಹೋಲಿಕೆ  

ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇವಿುಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿ ತನ್ನ ಎಲ್ಲಾ ಸೇವಕರಿಗೋಸ್ಕರ ಔತಣಮಾಡಿಸಿದನು.


ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನದಿಯೊಳಗಿಂದ ಬಂದು ಆಪುಹುಲ್ಲಿನಲ್ಲಿ ಮೇಯುತ್ತಿದ್ದವು.


ಅವುಗಳ ಹಿಂದೆ ಮೈಯೊಣಗಿ ಬಡವಾದ ಏಳು ಆಕಳುಗಳು ನದಿಯೊಳಗಣಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತರ ನದೀತೀರದಲ್ಲಿ ನಿಂತವು.


ಅವನು ತಿರಿಗಿ ನಿದ್ರೆಮಾಡಿದಾಗ ಮತ್ತೊಂದು ಕನಸುಬಿತ್ತು. ಅದೇನಂದರೆ - ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು