Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:44 - ಕನ್ನಡ ಸತ್ಯವೇದವು J.V. (BSI)

44 ಇನ್ನೂ ಫರೋಹನು ಅವನಿಗೆ - ನಾನು ಫರೋಹನು; ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ ಕಾಲನ್ನಾಗಲಿ ಕದಲಿಸಕೂಡದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಅಷ್ಟು ಮಾತ್ರವಲ್ಲ, ಫರೋಹನು ಅವನಿಗೆ, “ಫರೋಹನಾದ ನಾನು ಹೇಳುತ್ತಿದ್ದೇನೆ: ನಿನ್ನ ಅಪ್ಪಣೆಯಿಲ್ಲದೆ ಇಡೀ ಈಜಿಪ್ಟ್ ದೇಶದಲ್ಲಿ ಯಾರೂ ಏನನ್ನೂ ಮಾಡಕೂಡದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಫರೋಹನು ಅವನಿಗೆ, “ನಾನು ರಾಜ ಫರೋಹ. ಆದ್ದರಿಂದ ನನಗೆ ಇಷ್ಟವಾದದ್ದನ್ನು ಮಾಡುವೆನು. ಆದರೆ ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟಿನ ಬೇರೆ ಯಾರೂ ಕೈಯೆತ್ತಲೂ ಸಾಧ್ಯವಿಲ್ಲ, ಕಾಲನ್ನು ಚಲಿಸಲೂ ಸಾಧ್ಯವಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಇದಲ್ಲದೆ ಫರೋಹನು ಯೋಸೇಫನಿಗೆ, “ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟ್ ದೇಶದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ, ಕಾಲನ್ನಾಗಲಿ ಎತ್ತಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:44
4 ತಿಳಿವುಗಳ ಹೋಲಿಕೆ  

ತನ್ನ ಪ್ರಧಾನರನ್ನು ಇಷ್ಟಾನುಸಾರವಾಗಿ ಬಂಧಿಸುವದಕ್ಕೂ ತನ್ನ ಮಂತ್ರಿಗಳಿಗೆ ಬುದ್ಧಿಕಲಿಸುವದಕ್ಕೂ ಅವನಿಗೆ ಅಧಿಕಾರಕೊಟ್ಟನು.


ಆದರೆ ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬದು ನಿಮಗೆ ತಿಳಿಯುವಂತೆ ಇಸ್ರಾಯೇಲ್ಯರಲ್ಲಿರುವ ಮನುಷ್ಯರ ಮೇಲಾಗಲಿ ಪಶುಗಳ ಮೇಲಾಗಲಿ ಒಂದು ನಾಯಿಯಾದರೂ ಬೊಗಳುವದಿಲ್ಲ.


ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ ಅಡ್ಡಬೀಳಿರಿ ಎಂದು ಪ್ರಕಟಣೆಮಾಡಿಸಿ ಅವನನ್ನು ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.


ಯೆಹೂದ್ಯನಾದ ಆ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಜನ ಸಮೂಹಕ್ಕೆ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೋಸ್ಕರ ಸುಖಪ್ರಾರ್ಥನಾಪರನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು