ಆದಿಕಾಂಡ 41:48 - ಕನ್ನಡ ಸತ್ಯವೇದವು J.V. (BSI)48 ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರುಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಇರಿಸಿದನು; ಒಂದೊಂದು ಪಟ್ಟಣದ ಸುತ್ತಲಿದ್ದ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಕೂಡಿಸಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಆ ಏಳು ವರ್ಷದ ಬೆಳೆಯನ್ನು ಜೋಸೆಫನು ಶೇಖರಿಸಿ ಪಟ್ಟಣಗಳಲ್ಲಿ ಇಟ್ಟನು. ಆಯಾ ಪಟ್ಟಣದ ಸುತ್ತಲಿದ್ದ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲೇ ಶೇಖರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಈಜಿಪ್ಟಿನಲ್ಲಿ ಯೋಸೇಫನು ಆ ಏಳು ವರ್ಷಗಳ ಕಾಲದಲ್ಲಿ ಆಹಾರವನ್ನು ಸಂಗ್ರಹಿಸಿ ನಗರಗಳ ಉಗ್ರಾಣಗಳಲ್ಲಿಟ್ಟನು. ಪ್ರತಿಯೊಂದು ನಗರದ ಸುತ್ತುಮುತ್ತಲಿನ ಹೊಲಗಳಲ್ಲಿ ಬೆಳೆದ ದವಸಧಾನ್ಯವನ್ನು ಆಯಾ ನಗರಗಳಲ್ಲಿ ಕೂಡಿಸಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಹೀಗಿರಲಾಗಿ ಅವನು ಈಜಿಪ್ಟ್ ದೇಶದಲ್ಲಿದ್ದ ಆ ಏಳು ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಪಟ್ಟಣಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು. ಅಧ್ಯಾಯವನ್ನು ನೋಡಿ |