Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:5 - ಕನ್ನಡ ಸತ್ಯವೇದವು J.V. (BSI)

5 ಅವನು ತಿರಿಗಿ ನಿದ್ರೆಮಾಡಿದಾಗ ಮತ್ತೊಂದು ಕನಸುಬಿತ್ತು. ಅದೇನಂದರೆ - ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಫರೋಹನಿಗೆ ಮತ್ತೆ ನಿದ್ರೆ ಹತ್ತಿದಾಗ ಅವನಿಗೆ ಇನ್ನೊಂದು ಕನಸುಬಿತ್ತು. ಅದರಲ್ಲಿ ಕಾಳುತುಂಬಿದ ಏಳು ಬಲಿತ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಫರೋಹನು ಮತ್ತೆ ಮಲಗಿಕೊಂಡನು. ಅವನಿಗೆ ಎರಡನೆಯ ಕನಸಾಯಿತು. ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ಗಿಡದಲ್ಲಿ ಹುಟ್ಟಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ತಿರುಗಿ ನಿದ್ರೆ ಮಾಡಿದಾಗ, ಎರಡನೆಯ ಸಾರಿ ಕನಸನ್ನು ಕಂಡನು. ಒಂದೇ ದಂಟಿನಲ್ಲಿ ಏಳು ಒಳ್ಳೆಯ ಪುಷ್ಟಿಯಾದ ತೆನೆಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:5
4 ತಿಳಿವುಗಳ ಹೋಲಿಕೆ  

ಆಹಾರಕ್ಕಾಗಿ ಆಕಳಿನ ಮೊಸರು, ಆಡುಕುರಿಗಳ ಹಾಲು, ಕೊಬ್ಬಿದ ಕುರಿಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಪಾನಕ್ಕಾಗಿ ದ್ರಾಕ್ಷೆಯ ರಕ್ತರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.


ಮೈಯೊಣಗಿದ ಈ ಬಡ ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದುಬಿಟ್ಟವು. ಹೀಗೆ ಕಾಣಿಸುವಷ್ಟರಲ್ಲಿ ಫರೋಹನಿಗೆ ಎಚ್ಚರವಾಯಿತು.


ಅವುಗಳ ಹಿಂದೆ ಮೂಡಣ ಗಾಳಿಯಿಂದ ಕೆಟ್ಟು ಬತ್ತಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು;


ಹೀಗೆ ಅವರು ಕೆಲವು ಕಾಲ ಕಾವಲಲ್ಲಿದ್ದ ಮೇಲೆ ಅವರಿಬ್ಬರಿಗೂ, ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ಭಕ್ಷ್ಯಕಾರನಿಗೂ, ಒಂದೇ ರಾತ್ರಿ ಕನಸುಬಿತ್ತು; ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು