Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:50 - ಕನ್ನಡ ಸತ್ಯವೇದವು J.V. (BSI)

50 ಬರಗಾಲ ಬರುವದಕ್ಕಿಂತ ಮುಂಚೆ ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತೆಂಬಾಕೆಯಲ್ಲಿ ಅವನಿಗೆ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಬರಗಾಲ ಬರುವುದಕ್ಕೆ ಮುಂಚೆ ಜೋಸೆಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಅವರ ತಾಯಿ ಓನ್ ಪಟ್ಟಣದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಯೋಸೇಫನ ಹೆಂಡತಿ ಆಸನತ್ ಓನ್ ನಗರದಲ್ಲಿ ಆಚಾರ್ಯನಾಗಿದ್ದ ಪೋಟೀಫೆರನ ಮಗಳು. ಬರಗಾಲದ ಮೊದಲನೆಯ ವರ್ಷ ಬರುವುದಕ್ಕಿಂತ ಮೊದಲೇ ಯೋಸೇಫನಿಗೆ ಆಸನತಳಲ್ಲಿ ಇಬ್ಬರು ಗಂಡುಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಇದಲ್ಲದೆ ಬರಗಾಲದ ವರ್ಷಗಳು ಬರುವುದಕ್ಕೆ ಮುಂಚೆ, ಯೋಸೇಫನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್, ಅವಳನ್ನು ಯೋಸೇಫನಿಗೆ ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:50
6 ತಿಳಿವುಗಳ ಹೋಲಿಕೆ  

ನಾನು ಐಗುಪ್ತದೇಶಕ್ಕೆ ನಿನ್ನ ಬಳಿಗೆ ಬರುವದಕ್ಕಿಂತ ಮುಂಚೆ ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೇ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.


ಐಗುಪ್ತದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಆಚಾರ್ಯನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಎಫ್ರಾಯೀಮ್;


ಸೆರಾಯನು ಲೇಖಕನು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಮತ್ತು ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟು ಓನ್ ಎಂಬ ಗುರುಪೀಠದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ಹೊರಟನು.


ಅವನು ದವಸಧಾನ್ಯವನ್ನು ಸಮುದ್ರದ ಉಸಬಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟು ಬಿಟ್ಟನು; ಅದನ್ನು ಲೆಕ್ಕ ಮಾಡುವದಕ್ಕೆ ಆಗದೆಹೋಯಿತು.


ಚೊಚ್ಚಲುಮಗನು ಹುಟ್ಟಿದಾಗ ಯೋಸೇಫನು - ನಾನು ನನ್ನ ಎಲ್ಲಾ ಕಷ್ಟವನ್ನೂ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದ್ದಾನಲ್ಲಾ ಎಂದು ಹೇಳಿ ಅವನಿಗೆ ಮನಸ್ಸೆ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು