ಆದಿಕಾಂಡ 41:55 - ಕನ್ನಡ ಸತ್ಯವೇದವು J.V. (BSI)55 ಐಗುಪ್ತದೇಶಕ್ಕೆಲ್ಲಾ ಬರಬಂದಾಗ ಪ್ರಜೆಗಳು ಆಹಾರಬೇಕೆಂದು ಫರೋಹನಿಗೆ ಮೊರೆಯಿಟ್ಟುಕೊಂಡರು. ಅವನು ಅವರಿಗೆ - ಯೋಸೇಫನ ಬಳಿಗೆ ಹೋಗಿರಿ, ಅವನ ಮಾತಿನ ಮೇರೆಗೆ ಮಾಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಕ್ರಮೇಣ ಈಜಿಪ್ಟಿಗೂ ಬರ ಬಂದಾಗ ಪ್ರಜೆಗಳು ಆಹಾರಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಆಗ ಅವನು ಅವರಿಗೆ, “ಹೋಗಿ, ಜೋಸೆಫನ ಬಳಿಗೆ, ಅವನು ಹೇಳಿದಂತೆ ಮಾಡಿ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ಬರಗಾಲವು ಪ್ರಾರಂಭವಾದಾಗ ಜನರು ಆಹಾರಕ್ಕಾಗಿ ಫರೋಹನನ್ನು ಬೇಡಿಕೊಂಡರು. ಫರೋಹನು ಈಜಿಪ್ಟಿನ ಜನರಿಗೆ, “ಯೋಸೇಫನನ್ನು ಕೇಳಿರಿ; ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಈಜಿಪ್ಟ್‌ದವರೆಲ್ಲಾ ಹಸಿದು, ಜನರು ಆಹಾರಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ, ಫರೋಹನು ಎಲ್ಲಾ ಈಜಿಪ್ಟಿನವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ನಿಮಗೆ ಹೇಳುವುದನ್ನು ಮಾಡಿರಿ,” ಎಂದನು. ಅಧ್ಯಾಯವನ್ನು ನೋಡಿ |