ಆದಿಕಾಂಡ 41:57 - ಕನ್ನಡ ಸತ್ಯವೇದವು J.V. (BSI)57 ಇದಲ್ಲದೆ ಭೂಲೋಕದಲ್ಲೆಲ್ಲಾ ಬರವು ಭಯಂಕರವಾಗಿದ್ದದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ಅಂತೆಯೇ ಲೋಕದಲ್ಲೆಲ್ಲಾ ಬರವು ಭಯಂಕರವಾಗಿತ್ತು. ಎಲ್ಲ ದೇಶದವರು ಜೋಸೆಫನಿಂದ ಧಾನ್ಯ ಕೊಂಡುಕೊಳ್ಳಲು ಈಜಿಪ್ಟಿಗೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್57 ಭೂಲೋಕದಲ್ಲೆಲ್ಲಾ ಕ್ಷಾಮವು ಭಯಂಕರವಾಗಿದ್ದುದರಿಂದ ಎಲ್ಲಾ ದೇಶಗಳವರು ಯೋಸೇಫನಿಂದ ಆಹಾರವನ್ನು ಪಡೆದುಕೊಳ್ಳುವುದಕ್ಕಾಗಿ ಈಜಿಪ್ಟಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಇದಲ್ಲದೆ ಭೂಮಿಯ ಮೇಲೆಲ್ಲಾ ಬರಗಾಲವು ಕಠಿಣವಾಗಿದ್ದದರಿಂದ, ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಈಜಿಪ್ಟಿಗೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿ |