Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:8 - ಕನ್ನಡ ಸತ್ಯವೇದವು J.V. (BSI)

8 ಬೆಳಿಗ್ಗೆ ಅವನು ಮನದಲ್ಲಿ ಕಳವಳಗೊಂಡು ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ ವಿದ್ವಾಂಸರನ್ನೂ ಕರಸಿ ಅವರಿಗೆ ತನ್ನ ಕನಸನ್ನು ತಿಳಿಸಲಾಗಿ ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಅವರಲ್ಲಿ ಒಬ್ಬರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:8
39 ತಿಳಿವುಗಳ ಹೋಲಿಕೆ  

ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ಇವರು ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.


ಆದರೆ ಐಗುಪ್ತದೇಶದ ಜೋಯಿಸರು ತಮ್ಮ ಗುಪ್ತವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವನು ಹೇಳಿದ್ದಂತೆಯೇ ಅವನು ಮೋಶೆ ಆರೋನರ ಮಾತನ್ನು ಕೇಳದೆ ಹೋದನು.


ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು -


ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ಹೀಗಿರುವದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕಾಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವದು, ವಿವೇಕಿಗಳ ವಿವೇಕವು ಅಡಗುವದು ಎಂದು ಹೇಳಿದನು.


ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರಿಸಿದಾಗ ಆ ಜೋಯಿಸರೂ ತಮ್ಮ ಗುಪ್ತವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ಲೊಚಗುಟ್ಟುವ ಪಿಟಿಪಿಟಿಗುಟ್ಟುವ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸಿರಿ ಎಂದು ಒಂದು ವೇಳೆ ನಿಮಗೆ ಹೇಳಾರು. ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವದು ಯುಕ್ತವೋ?


ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.


ಜೋಯಿಸರು ತಮ್ಮ ಗುಪ್ತ ವಿದ್ಯೆಗಳಿಂದ ಹಾಗೆಯೇ ಮಾಡಿ ಐಗುಪ್ತದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.


ಅವರು ಅವನಿಗೆ - ನಮಗೆ ಸ್ವಪ್ನಬಿತ್ತು; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ ಎಂದು ಹೇಳಲು ಯೋಸೇಫನು ಅವರಿಗೆ - ಸ್ವಪ್ನಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ; ದಯಮಾಡಿ ನಿಮ್ಮ ಸ್ವಪ್ನವನ್ನು ನನಗೆ ತಿಳಿಸಿರಿ ಎಂದು ಹೇಳಿದನು.


ಬೆಳಿಗ್ಗೆ ಯೋಸೇಫನು ಅವರ ಬಳಿಗೆ ಬಂದಾಗ ಅವರು ಚಿಂತೆಯುಳ್ಳವರಾಗಿ ಕಾಣಿಸಿದರು.


ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ನಿರಾಕರಿಸುವೆನು ಎಂಬದಾಗಿ ಶಾಸ್ತ್ರೋಕ್ತಿಯುಂಟಲ್ಲಾ.


ಇದಲ್ಲದೆ ಎಪಿಕೂರಿಯರು ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು - ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ? ಅಂದರು. ಅವನು ಯೇಸುವಿನ ವಿಷಯವಾಗಿಯೂ ಸತ್ತವರು ಎದ್ದುಬರುವರೆಂಬುವ ವಿಷಯವಾಗಿಯೂ ಸಾರುತ್ತಿದ್ದದರಿಂದ - ಇವನು ಅನ್ಯದೇಶದ ದೈವಗಳನ್ನು ಪ್ರಸಿದ್ಧಿಪಡಿಸುವವನಾಗಿ ತೋರುತ್ತಾನೆಂದು ಬೇರೆ ಕೆಲವರು ಹೇಳಿದರು.


ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ಉಪದೇಶಹೊಂದಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥನಾದನು.


ಅದು ನನಗೆ ಕೇಳಿಸಲು ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ವಿಪತ್ಕಾಲವು ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವಾಗ ನಾನು ಅದನ್ನು ತಾಳ್ಮೆಯಿಂದ ಕಾದಿರಬೇಕೆಂದು ನನಗೆ ತಿಳಿಯಲು ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು.


ಆಗ ದಾನಿಯೇಲನಾದ ನಾನು ಬೆಂಡಾಗಿ ಕೆಲವು ದಿವಸ ಕಾಯಿಲೆಬಿದ್ದೆನು; ಆಮೇಲೆ ಎದ್ದು ರಾಜಕಾರ್ಯವನ್ನು ನಡಿಸಿದೆನು; ಆ ಕನಸಿಗೆ ಬೆಚ್ಚಿಬೆರಗಾದೆನು; ಅದು ಯಾರಿಗೂ ತಿಳಿಯಲಿಲ್ಲ.


ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡು ಮೊಗಗೆಟ್ಟೆನು; ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆನು.


ಪರಿಶುದ್ಧದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು; ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು ಮಂತ್ರವಾದಿಗಳು ಪಂಡಿತರು ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇವಿುಸಿದನು;


ಐಗುಪ್ತದ ಅಂತರಾತ್ಮವು ಬರಿದಾಗುವದು; ಅದರ ಆಲೋಚನೆಯನ್ನು ಭಂಗಪಡಿಸುವೆನು; ಅಲ್ಲಿಯವರು ವಿಗ್ರಹಗಳನ್ನೂ ಮಂತ್ರಗಾರರನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸುವರು.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಆ ಹುಣ್ಣುಗಳು ಜೋಯಿಸರಲ್ಲಿಯೂ ಐಗುಪ್ತ್ಯರೆಲ್ಲರಲ್ಲಿಯೂ ಇದ್ದದರಿಂದ ಆ ಜೋಯಿಸರು ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು.


ಬತ್ತಿಹೋಗಿದ್ದ ಈ ತೆನೆಗಳು ಆ ಏಳು ಒಳ್ಳೇ ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಹೀಗೆ ಕಾಣಿಸುವಷ್ಟರಲ್ಲಿ ಫರೋಹನು ಎಚ್ಚತ್ತು ಅದನ್ನು ಕನಸೆಂದು ತಿಳುಕೊಂಡನು.


ಆಗ ಫರೋಹನು ಯೋಸೇಫನಿಗೆ - ನಾನು ಒಂದು ಕನಸು ಕಂಡಿದ್ದೇನೆ; ಅದರ ಅರ್ಥವನ್ನು ಹೇಳಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳಬಲ್ಲವನೆಂದು ವರ್ತಮಾನ ಕೇಳಿದ್ದೇನೆ ಎಂದು ಹೇಳಲು


ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿಹೇಳುವವರನ್ನೂ ಕರೆದು ಅವರಿಗೆ - ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ತಿರಿಗಿ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು? ತಿಳಿಸಿರಿ ಅನ್ನಲು ಅವರು -


ಆದದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರತರುವ ಹಾಗೆ ಆಜ್ಞಾಪಿಸಿದೆನು.


ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದರಿಂದ ನೀನು ಶಕ್ತನೇ ಸರಿ.


ಬತ್ತಿಹೋಗಿದ್ದ ತೆನೆಗಳು ಆ ಏಳು ಒಳ್ಳೇ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ಬಿಚ್ಚಿಹೇಳುವದಕ್ಕೆ ಅವರಲ್ಲಿ ಯಾರಿಂದಲೂ ಆಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು