Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:1 - ಕನ್ನಡ ಸತ್ಯವೇದವು J.V. (BSI)

1 ಐಗುಪ್ತದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ಕೇಳಿ ತನ್ನ ಮಕ್ಕಳಿಗೆ - ನೀವು ಒಬ್ಬರನ್ನೊಬ್ಬರು ನೋಡುತ್ತಿರುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈಜಿಪ್ಟಿನಲ್ಲಿ ದವಸಧಾನ್ಯ ದೊರಕುತ್ತದೆ ಎಂಬ ಸಮಾಚಾರ ಯಕೋಬನಿಗೆ ಮುಟ್ಟಿತು. ಅವನು ತನ್ನ ಮಕ್ಕಳಿಗೆ, “ನೀವು ಮುಖಮುಖ ನೋಡಿಕೊಂಡು ಸುಮ್ಮನಿರುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ಕಾನಾನಿನಲ್ಲಿದ್ದ ಯಾಕೋಬನಿಗೆ ತಿಳಿಯಿತು. ಆದ್ದರಿಂದ ಯಾಕೋಬನು ತನ್ನ ಗಂಡುಮಕ್ಕಳಿಗೆ, “ನಾವು ಇಲ್ಲಿ ಏನೂ ಮಾಡದೆ ಕುಳಿತುಕೊಂಡಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ಯಾಕೋಬನು ತಿಳಿದಾಗ, ಅವನು ತನ್ನ ಪುತ್ರರಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡು ಸುಮ್ಮನಿರುವುದೇನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:1
13 ತಿಳಿವುಗಳ ಹೋಲಿಕೆ  

ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋಬನು ಕೇಳಿ ನಮ್ಮ ಪಿತೃಗಳನ್ನು ಮೊದಲು ಒಂದು ಸಾರಿ ಅಲ್ಲಿಗೆ ಕಳುಹಿಸಿದನು.


ಆಗ ಯೆಹೋವನು ಯೆಹೋಶುವನಿಗೆ ಹೇಳಿದ್ದೇನಂದರೆ - ಏಳು, ನೀನು ಈ ಪ್ರಕಾರ ಬೋರಲಬಿದ್ದಿರುವದೇಕೆ?


ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡಿಸುವದಕ್ಕೋಸ್ಕರ ಪೇತ್ರನನ್ನು ಪ್ರೇರಿಸಿದಾತನು ಅನ್ಯಜನರಲ್ಲಿ ಅದನ್ನು ನಡಿಸುವದಕ್ಕೆ ನನ್ನನ್ನೂ ಪ್ರೇರಿಸಿದ್ದನು.


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.


[ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ಏಳು ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು, ಧೈರ್ಯದಿಂದ ಕೈಹಾಕು ಎಂದು ಹೇಳಿದನು.


ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.


ಆ ಗುಡುಗುವಿುಂಚುಗಳನ್ನೂ ತುತೂರಿ ಧ್ವನಿಯಾಗುತ್ತಿರುವದನ್ನೂ ಬೆಟ್ಟದಿಂದ ಹೊಗೆ ಹೊರಡುವದನ್ನೂ ಜನರೆಲ್ಲರು ನೋಡಿ ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದರಿಂದ ಇಸ್ರಾಯೇಲ್ ಮೇಸ್ತ್ರಿಗಳು ತಮಗೆ ದುರವಸ್ಥೆಯುಂಟಾಯಿತು ಎಂದು ತಿಳಿದುಕೊಂಡರು.


ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಕೇಳಿದ್ದೇನೆ; ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿರಿ ಎಂದು ಹೇಳಿದ್ದರಿಂದ


ಇದಲ್ಲದೆ ಭೂಲೋಕದಲ್ಲೆಲ್ಲಾ ಬರವು ಭಯಂಕರವಾಗಿದ್ದದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.


ಯೋಸೇಫನು ಹೇಳಿದ್ದ ಪ್ರಕಾರ ಕ್ಷಾಮದ ಏಳು ವರುಷಗಳಿಗೆ ಪ್ರಾರಂಭವಾಯಿತು. ಬರವು ಸುತ್ತಲಿದ್ದ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು; ಐಗುಪ್ತದೇಶದಲ್ಲಿ ಮಾತ್ರ ಆಹಾರ ದೊರಕುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು