ಆದಿಕಾಂಡ 42:13 - ಕನ್ನಡ ಸತ್ಯವೇದವು J.V. (BSI)13 ಅವರು - ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ; ಒಬ್ಬನಿಲ್ಲ ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ಕಾನಾನ್ ನಾಡಿನವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲೇ ಇದ್ದಾನೆ; ಒಬ್ಬನು ಇಲ್ಲವಾದನು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅದಕ್ಕೆ ಅವರು, “ಇಲ್ಲ, ನಾವೆಲ್ಲಾ ಸಹೋದರರು. ನಮ್ಮ ಕುಟುಂಬದಲ್ಲಿ ಹನ್ನೆರಡು ಮಂದಿ ಅಣ್ಣತಮ್ಮಂದಿರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಮ್ಮ ಕಿರಿಯ ತಮ್ಮನು ನಮ್ಮ ತಂದೆಯೊಂದಿಗೆ ಮನೆಯಲ್ಲಿದ್ದಾನೆ; ಇನ್ನೊಬ್ಬ ತಮ್ಮನು ಹೊರಟುಹೋದನು. ತಮ್ಮ ಸೇವಕರಾದ ನಾವು ಕಾನಾನ್ ದೇಶದಿಂದ ಬಂದವರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದಕ್ಕವರು, “ನಿನ್ನ ದಾಸರಾದ ನಾವು ಹನ್ನೆರಡು ಸಹೋದರರು. ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಈಗ ಚಿಕ್ಕವನು ನನ್ನ ತಂದೆಯೊಂದಿಗೆ ಇದ್ದಾನೆ, ಮತ್ತೊಬ್ಬನು ಇಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |