Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:2 - ಕನ್ನಡ ಸತ್ಯವೇದವು J.V. (BSI)

2 ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಕೇಳಿದ್ದೇನೆ; ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿರಿ ಎಂದು ಹೇಳಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈಜಿಪ್ಟಿನಲ್ಲಿ ದವಸಧಾನ್ಯ ಉಂಟೆಂದು ನಾನು ಕೇಳಿದ್ದೇನೆ, ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ, ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಮುಂದುವರಿಸಿ, “ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ, ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡುಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:2
11 ತಿಳಿವುಗಳ ಹೋಲಿಕೆ  

ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ - ನೀನೂ ನಾವೂ ನಮ್ಮ ಮಕ್ಕಳೂ ಎಲ್ಲರೂ ಸಾಯದೆ ಬದುಕಿಕೊಳ್ಳುವಂತೆ ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡಪ್ಪಾ; ನಾವು ಹೊರಟು ಹೋಗುವೆವು.


ಮನುಷ್ಯನು ರೊಟ್ಟಿತಿಂದ ಮಾತ್ರದಿಂದ ಬದುಕುವದಿಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುವನು ಎಂದು ಬರೆದದೆ ಅಂದನು.


ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ - ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆಮಾಡು; ಏಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ನಾನು ಸಾಯುವದಿಲ್ಲ; ಜೀವದಿಂದಿದ್ದು ಯಾಹುವಿನ ಕ್ರಿಯೆಗಳನ್ನು ಸಾರುವೆನು.


ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ನಿನ್ನ ಮಗನಾದ ಯೋಸೇಫನು ಹೀಗನ್ನುತ್ತಾನೆ - ದೇವರು ನನ್ನನ್ನು ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇವಿುಸಿದ್ದಾನೆ; ನೀನು ತಡಮಾಡದೆ ನನ್ನ ಬಳಿಗೆ ಬಾ;


ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ ನಿನಗೆ ಧಾನ್ಯವನ್ನು ಕೊಂಡುಕೊಂಡು ಬರುತ್ತೇವೆ;


ಅವರು ಐಗುಪ್ತದೇಶದಿಂದ ತಂದಿದ್ದ ದವಸವು ಮುಗಿದನಂತರ ಅವರ ತಂದೆಯು ಅವರಿಗೆ - ನೀವು ತಿರಿಗಿ ಹೋಗಿ ಇನ್ನು ಸ್ವಲ್ಪ ಧಾನ್ಯವನ್ನು ಕೊಂಡುಕೊಂಡು ಬನ್ನಿರಿ ಅಂದನು.


ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋಬನು ಕೇಳಿ ನಮ್ಮ ಪಿತೃಗಳನ್ನು ಮೊದಲು ಒಂದು ಸಾರಿ ಅಲ್ಲಿಗೆ ಕಳುಹಿಸಿದನು.


ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ತರುವದಕ್ಕೋಸ್ಕರ ಐಗುಪ್ತದೇಶಕ್ಕೆ ಹೊರಟರು.


ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.


ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು