ಆದಿಕಾಂಡ 42:21 - ಕನ್ನಡ ಸತ್ಯವೇದವು J.V. (BSI)21 ಆದರೆ ಅವರು ತಮ್ಮತಮ್ಮೊಳಗೆ - ನಾವು ನಮ್ಮ ತಮ್ಮನಿಗೆ ಮಾಡಿದ್ದು ದ್ರೋಹವೇ ಸರಿ; ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ; ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಅವರು ತಮ್ಮತಮ್ಮೊಳಗೆ, “ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿ ಬೇಡಿಕೊಂಡ. ಅವನ ಪ್ರಾಣಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡು ಇದ್ದೇವೆ,” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವರು ಒಬ್ಬರಿಗೊಬ್ಬರು, “ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಈ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾಪಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣಸಂಕಟಕ್ಕೀಡಾಗಿದ್ದೇವೆ” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಅವರು, “ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ, ಅವನ ಪ್ರಾಣಸಂಕಟವನ್ನು ಕಂಡರೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು,” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿ |
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.