ಆದಿಕಾಂಡ 42:25 - ಕನ್ನಡ ಸತ್ಯವೇದವು J.V. (BSI)25 ಆಮೇಲೆ ಯೋಸೇಫನು ತನ್ನ ಆಳುಗಳಿಗೆ - ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರಿಗಿ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆಮಾಡಲು ಅವರು ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇದಾದ ಬಳಿಕ ಜೋಸೆಫನು ತನ್ನ ಆಳುಗಳಿಗೆ, “ಆ ಜನರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ಅದರಲ್ಲಿ ಇಟ್ಟುಬಿಡಿ. ಅವರ ಪ್ರಯಾಣಕ್ಕೆ ಬೇಕಾದ ಅಹಾರವನ್ನು ಕೊಟ್ಟು ಕಳಿಸಿರಿ,” ಎಂದು ಅಪ್ಪಣೆ ಮಾಡಿದ. ಆಳುಗಳು ಅದರಂತೆಯೆ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಮೇಲೆ ಯೋಸೇಫನು ತನ್ನ ಸೇವಕರಿಗೆ, “ಅವರ ಚೀಲಗಳಿಗೆ ದವಸಧಾನ್ಯಗಳನ್ನು ತುಂಬಿರಿ” ಎಂದು ಹೇಳಿದನು. ಈ ದವಸಧಾನ್ಯಗಳಿಗೆ ಸಹೋದರರು ಹಣವನ್ನು ಪಾವತಿ ಮಾಡಿದರೂ ಯೋಸೇಫನು ಆ ಹಣವನ್ನು ಇಟ್ಟುಕೊಳ್ಳಲಿಲ್ಲ. ಅವನು ಆ ಹಣವನ್ನು ಅವರವರ ದವಸಧಾನ್ಯಗಳ ಚೀಲಗಳಲ್ಲಿ ಇಡಿಸಿದನು. ಅಲ್ಲದೆ ಪ್ರಯಾಣಕ್ಕೆ ಬೇಕಾದ ವಸ್ತುಗಳನ್ನೂ ಅವರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸಬೇಕೆಂದೂ, ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರುಗಿ ಇಡಬೇಕೆಂದೂ, ಪ್ರಯಾಣಕ್ಕಾಗಿ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |