Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:32 - ಕನ್ನಡ ಸತ್ಯವೇದವು J.V. (BSI)

32 ನಾವು ಒಬ್ಬ ತಂದೆಯಿಂದಲೇ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ; ನಮ್ಮಲ್ಲಿ ಒಬ್ಬನಿಲ್ಲ; ಚಿಕ್ಕವನೋ ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದ್ದಾನೆ ಎಂದು ಹೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾವು ಒಬ್ಬ ತಂದೆಯಿಂದಲೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ. ನಮ್ಮಲ್ಲಿ ಒಬ್ಬನಿಲ್ಲ. ಚಿಕ್ಕವನು ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದಾನೆ” ಎಂದು ಹೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನಾವು ಒಬ್ಬ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಮ್ಮಲ್ಲಿ ಒಬ್ಬನು ಇಲ್ಲವಾದ. ಚಿಕ್ಕವನೋ ಈಗ ಕಾನಾನ್ ನಾಡಿನಲ್ಲಿ ನಮ್ಮ ತಂದೆಯ ಬಳಿಯಲ್ಲಿದ್ದಾನೆ’ ಎಂದು ಹೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರೆಂದೂ ನಮಗೆ ಒಬ್ಬನೇ ತಂದೆಯೆಂದೂ ಅವನಿಗೆ ಹೇಳಿದೆವು. ನಮ್ಮ ಒಬ್ಬ ತಮ್ಮನು ಸತ್ತುಹೋದನೆಂದೂ ನಮ್ಮ ಕಿರಿಯ ತಮ್ಮನು ಕಾನಾನ್ ದೇಶದಲ್ಲಿರುವ ನಮ್ಮ ಮನೆಯಲ್ಲಿರುವನೆಂದೂ ಅವನಿಗೆ ಹೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಾವು ಹನ್ನೆರಡು ಮಂದಿ ಸಹೋದರರಾಗಿದ್ದು, ಒಂದೇ ತಂದೆಯ ಪುತ್ರರಾಗಿದ್ದೇವೆ, ಒಬ್ಬನು ಇಲ್ಲ, ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ,” ಎಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:32
5 ತಿಳಿವುಗಳ ಹೋಲಿಕೆ  

ಅವರು - ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ; ಒಬ್ಬನಿಲ್ಲ ಅಂದರು.


ನಾವು ಅವನಿಗೆ - ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ;


ಅದಕ್ಕೆ ದೇಶಾಧಿಪತಿ - ನೀವು ಸತ್ಯವಂತರೋ ಅಲ್ಲವೋ ಎಂಬದು ಗೊತ್ತಾಗುವದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ


ತನ್ನ ಬಟ್ಟೆಗಳನ್ನು ಹರಿದುಕೊಂಡು ತನ್ನ ತಮ್ಮಂದಿರ ಬಳಿಗೆ ಬಂದು - ಆ ಹುಡುಗನು ಇಲ್ಲವಲ್ಲಾ; ಅಯ್ಯೋ, ನಾನೆಲ್ಲಿಗೆ ಹೋಗಲಿ ಎಂದು ಗೋಳಾಡಿದನು.


ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನೆಂಬ ಸಣ್ಣ ಗೋತ್ರದವರೂ ಗುಂಪಾಗಿ ಬರುವ ಯೆಹೂದಕುಲ ಪ್ರಭುಗಳೂ ಜೆಬುಲೂನ ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು