ಆದಿಕಾಂಡ 42:36 - ಕನ್ನಡ ಸತ್ಯವೇದವು J.V. (BSI)36 ಆಗ ಅವರ ತಂದೆಯಾದ ಯಾಕೋಬನು ಅವರಿಗೆ - ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ; ಬೆನ್ಯಾಮೀನನನ್ನೂ ಕರಕೊಂಡು ಹೋಗಬೇಕೆಂದಿದ್ದೀರಿ, ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂತು ಎಂದು ಹೇಳಲು ರೂಬೇನನು ಅವನಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆಗ ಅವರ ತಂದೆ ಯಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಜೋಸೆಫನು ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟದುಃಖವೆಲ್ಲ ನನ್ನ ತಲೆಯ ಮೇಲೆ ಬಂದೆರಗಿದೆ!” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯಾಕೋಬನು ಅವರಿಗೆ, “ನಾನು ನನ್ನ ಮಕ್ಕಳನ್ನೆಲ್ಲ ಕಳೆದುಕೊಳ್ಳಬೇಕೆಂಬುದು ನಿಮಗೆ ಇಷ್ಟವೇ? ಯೋಸೇಫನು ಇಲ್ಲವಾದನು. ಸಿಮೆಯೋನನೂ ಇಲ್ಲವಾದನು. ಈಗ ಬೆನ್ಯಾಮೀನನನ್ನು ತೆಗೆದುಕೊಂಡು ಹೋಗಬೇಕೆಂದಿರುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು. ಅಧ್ಯಾಯವನ್ನು ನೋಡಿ |