Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:5 - ಕನ್ನಡ ಸತ್ಯವೇದವು J.V. (BSI)

5 ಧಾನ್ಯವನ್ನು ಕೊಂಡುಕೊಳ್ಳುವದಕ್ಕೋಸ್ಕರ ಐಗುಪ್ತದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು; ಕಾನಾನ್ ದೇಶದಲ್ಲಿಯೂ ಬರವಿತ್ತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಾನಾನ್ ನಾಡಿನಲ್ಲೂ ಬರವಿತ್ತು. ಧಾನ್ಯ ಕೊಂಡುಕೊಳ್ಳಲು ಅಲ್ಲಿಂದ ಈಜಿಪ್ಟಿಗೆ ಬಂದವರಲ್ಲಿ ಯಕೋಬನ (ಇಸ್ರಯೇಲನ) ಮಕ್ಕಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕಾನಾನಿನಲ್ಲಿ ಬರಗಾಲ ಭೀಕರವಾಗಿತ್ತು. ಆದ್ದರಿಂದ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಅನೇಕ ಜನರು ಕಾನಾನಿನಿಂದ ಈಜಿಪ್ಟಿಗೆ ಹೋದರು; ಇಸ್ರೇಲನ ಗಂಡುಮಕ್ಕಳೂ ಅವರೊಂದಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕಾನಾನ್ ದೇಶದಲ್ಲಿ ಬರವಿದ್ದುದರಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಬರುವವರೊಂದಿಗೆ ಇಸ್ರಾಯೇಲನ ಪುತ್ರರೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:5
7 ತಿಳಿವುಗಳ ಹೋಲಿಕೆ  

ಆಗ ಐಗುಪ್ತ ಕಾನಾನ್‍ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ನಮ್ಮ ಪಿತೃಗಳಿಗೆ ಕಾಳುಕಡ್ಡಿ ಸಿಕ್ಕಲಿಲ್ಲ.


ಇದಲ್ಲದೆ ಭೂಲೋಕದಲ್ಲೆಲ್ಲಾ ಬರವು ಭಯಂಕರವಾಗಿದ್ದದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.


ಆ ದೇಶದಲ್ಲಿ ಘೋರ ಕ್ಷಾಮವಿದ್ದದರಿಂದ ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದುಹೋದನು.


ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರವಲ್ಲದೆ ಇನ್ನೂ ಒಂದು ಬರವು ಕಾನಾನ್‍ದೇಶಕ್ಕೆ ಬಂತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.


ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಪವಿತ್ರಾತ್ಮ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು;


ದಾವೀದನ ಕಾಲದಲ್ಲಿ ಮೂರು ವರುಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು - ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ ಅವನ ಮನೆಯವರ ಮೇಲೆಯೂ ರಕ್ತಾಪರಾಧವಿರುತ್ತದೆ ಎಂದು ಉತ್ತರಕೊಟ್ಟನು.


ಯೋಸೇಫನು ಹೇಳಿದ್ದ ಪ್ರಕಾರ ಕ್ಷಾಮದ ಏಳು ವರುಷಗಳಿಗೆ ಪ್ರಾರಂಭವಾಯಿತು. ಬರವು ಸುತ್ತಲಿದ್ದ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು; ಐಗುಪ್ತದೇಶದಲ್ಲಿ ಮಾತ್ರ ಆಹಾರ ದೊರಕುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು