Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:9 - ಕನ್ನಡ ಸತ್ಯವೇದವು J.V. (BSI)

9 ಅವನು ಅವರ ವಿಷಯ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡು ಅವರಿಗೆ - ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ನೋಡಿಕೊಳ್ಳುವದಕ್ಕಾಗಿ ಬಂದವರು ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರ ವಿಷಯವಾಗಿ ತಾನು ಕಂಡಿದ್ದ ಕನಸುಗಳನ್ನು ಜೋಸೆಫನು ನೆನಪಿಗೆ ತಂದುಕೊಂಡನು. ಅವರನ್ನು ನೋಡಿ, “ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ಪತ್ತೆಹಚ್ಚುವುದಕ್ಕಾಗಿ ಬಂದವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಯೋಸೇಫನು ತನ್ನ ಅಣ್ಣಂದಿರ ಬಗ್ಗೆ ತಾನು ಕಂಡಿದ್ದ ಕನಸುಗಳ ಬಗ್ಗೆ ಜ್ಞಾಪಿಸಿಕೊಂಡು ಅವರಿಗೆ, “ನೀವು ಆಹಾರವನ್ನು ಕೊಂಡುಕೊಳ್ಳಲು ಬಂದಿಲ್ಲ; ನೀವು ಗೂಢಚಾರರು. ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳಲು ಬಂದಿರುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವರಿಗೆ, “ನೀವು ಗೂಢಚಾರರು, ದೇಶದ ಒಳಗುಟ್ಟನ್ನು ನೋಡುವುದಕ್ಕೆ ಬಂದಿದ್ದೀರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:9
15 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಆರೋನನ ಕೈಯಿಂದ ಆ ಬಸವನನ್ನು ಮಾಡಿಸಿಕೊಂಡದ್ದರಿಂದ ಯೆಹೋವನು ಅವರನ್ನು ದಂಡಿಸಿದನು.


ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.


ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಕ್ಕೂ ಒಪ್ಪಿಸಬೇಕೆಂದು ಹೊಂಚಿನೋಡುವವರಾಗಿ ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ಹಿಡಿಯುವದಕ್ಕೆ [ಆತನ ಬಳಿಗೆ] ಕಳುಹಿಸಿದರು.


ಅವನು ಕೂಡಲೆ ಗೂಢಚಾರರನ್ನು ಕಳುಹಿಸಿ ಸೌಲನು ಇಳುಕೊಂಡಿದ್ದ ಸ್ಥಳವನ್ನು ಗೊತ್ತುಮಾಡಿಕೊಂಡನು.


ಅವರು ಆ ಊರೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ - ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆ ತೋರಿಸುವೆವು ಎಂದು ಹೇಳಲು ಅವನು ಅಂಥ ದಾರಿಯನ್ನು ತೋರಿಸಿದನು.


ಆ ಯೌವನಸ್ಥರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಗಳನ್ನೂ ಸಹೋದರರನ್ನೂ ಅವಳಿಗಿರುವದೆಲ್ಲವನ್ನೂ ಅವಳ ಗೋತ್ರದ ಎಲ್ಲಾ ಜನರನ್ನೂ ತಂದು ಇಸ್ರಾಯೇಲ್ಯರ ಪಾಳೆಯದ ಹೊರಗೆ ಇಟ್ಟರು.


ನೂನನ ಮಗನಾದ ಯೆಹೋಶುವನು [ಕಾನಾನ್] ದೇಶವನ್ನೂ ಯೆರಿಕೋ ಪಟ್ಟಣವನ್ನೂ ನೋಡುವದಕ್ಕೋಸ್ಕರ ಶಿಟ್ಟೀವಿುನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟು ಹೋಗಿ ರಾಹಾಬಳೆಂಬ ಸೂಳೆಯ ಮನೆಯಲ್ಲಿ ಇಳುಕೊಂಡರು.


ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರಕೊಂಡು ಬರಬೇಕು; ಕರಕೊಂಡು ಬಂದರೆ ನೀವು ಗೂಢಚಾರರಲ್ಲ, ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಬಿಡಿಸಿಬಿಡುತ್ತೇನೆ, ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ನಡಿಸಬಹುದೆಂದು ಹೇಳಿದನು ಅಂದರು.


ಅವನನ್ನು ಕರೆದುಕೊಂಡು ಬರುವದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡಿಸುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ, ಫರೋಹನ ಜೀವದಾಣೆ, ನೀವು ಗೂಢಚಾರರೇ ಎಂದು ಹೇಳಿ


ಅಲ್ಲಿನ ಪ್ರಭುಗಳು ತಮ್ಮ ಒಡೆಯನಾದ ಹಾನೂನನಿಗೆ - ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ತಿಳಿಯುತ್ತೀಯೋ? ಪಟ್ಟಣವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದು ತನ್ನ ಆಳುಗಳನ್ನು ಕಳುಹಿಸಿದ್ದಾನೆ ಎಂದು ಹೇಳಿದರು.


ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು; ಆದರೆ ಅವನ ತಂದೆಯು ಅವನ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು