Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:11 - ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದಕ್ಕೆ ಅವರ ತಂದೆಯಾದ ಇಸ್ರೇಲನು, “ಇದು ನಿಜವಾಗಿಯೂ ಸತ್ಯವಾಗಿದ್ದರೆ, ನಿನ್ನೊಂದಿಗೆ ಬೆನ್ಯಾಮೀನನನ್ನು ಕರೆದುಕೊಂಡು ಹೋಗು. ಆದರೆ ರಾಜ್ಯಪಾಲನಿಗೆ ಶ್ರೇಷ್ಠವಾದ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಹೋಗಿ. ನಮ್ಮ ನಾಡಿನಲ್ಲಿ ದೊರಕುವ ಜೇನು, ಆಕ್ರೋಡು, ಬಾದಾಮಿ, ಹಾಲುಮಡ್ಡಿ ಮತ್ತು ಗೋಲರಸ ಇವುಗಳನ್ನು ತೆಗೆದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಅವರ ತಂದೆ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮೊಂದಿಗೆ ಇಟ್ಟುಕೊಂಡು, ಆ ಮನುಷ್ಯನಿಗೆ ಕಾಣಿಕೆ ತೆಗೆದುಕೊಂಡು ಹೋಗಿರಿ. ಅಂದರೆ, ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಆಕ್ರೋಡು ಮತ್ತು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:11
37 ತಿಳಿವುಗಳ ಹೋಲಿಕೆ  

ಆಮೇಲೆ ಅವರು ಊಟಕ್ಕೆ ಕೂತುಕೊಂಡರು. ಅಷ್ಟರಲ್ಲಿ ಅವರು ಕಣ್ಣೆತ್ತಿ ನೋಡಿ ಇಷ್ಮಾಯೇಲ್ಯರ ಗುಂಪು ಒಂಟೆಗಳ ಮೇಲೆ ಹಾಲುಮಡ್ಡಿ, ಸುಗಂಧತೈಲ, ರಕ್ತಬೋಳ ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವದನ್ನು ಕಂಡರು.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ಯೆಹೂದ್ಯರೂ ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ವಿುನ್ನೀಥಿನ ಗೋದಿ ಕಂಡಸಕ್ಕರೆ ಜೇನು ಎಣ್ಣೆ ಸುಗಂಧತೈಲ ಈ ಸಾಮಗ್ರಿಗಳನ್ನು ನಿನಗೆ ಸೇರಿಸಿದರು.


ಕಾಣಿಕೆಯು ಅನುಕೂಲತೆಗೂ ಶ್ರೀಮಂತರ ಸಾನ್ನಿಧ್ಯಪ್ರವೇಶಕ್ಕೂ ಸಾಧನ.


ಅದಕ್ಕೆ ಸೌಲನು - ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು ಎನ್ನಲು ಆಳು -


ಅವನು ಒಡಂಬಡದೆ ಇದ್ದದರಿಂದ ಕರ್ತನ ಚಿತ್ತವಿದ್ದಂತೆ ಆಗಲಿ ಎಂದು ಹೇಳಿ ನಾವು ಸುಮ್ಮಗಾದೆವು.


ದೇದಾನಿನವರು ನಿನ್ನ ವರ್ತಕರು; ಬಹು ದ್ವೀಪಗಳ ಉತ್ಪತ್ತಿಯು ನಿನ್ನ ಕೈಗೆ ಸೇರಿತು; ಗಜದಂತಗಳನ್ನೂ ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸಿದರು.


ಎನ್ನಿನಿಯನೇ, ತ್ವರೆಪಡು, ಸುಗಂಧಸಸ್ಯಪರ್ವತಗಳಲ್ಲಿ ಜಿಂಕೆಯಂತೆಯೂ ಪ್ರಾಯದ ಎರಳೆಯಂತೆಯೂ ಇರು.


ಜಟಾಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತವಿಧಧೂಪ, ರಕ್ತಬೋಳ, ಅಗುರು, ಸಕಲ ಮುಖ್ಯ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.


ಪ್ರಿಯಳೇ, ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೇಮವು ದ್ರಾಕ್ಷಾರಸಕ್ಕಿಂತ ಎಷ್ಟೋ ಮೇಲು! ನಿನ್ನ ತೈಲದ ಪರಿಮಳವು ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!


ಗುಪ್ತ ಬಹುಮಾನವು ಕೋಪವನ್ನಾರಿಸುವದು; ಮಡಲಲ್ಲಿಟ್ಟ ಲಂಚವು ಬಲು ಸಿಟ್ಟನ್ನಣಗಿಸುವದು.


ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು; ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೆ.


ನೆರೆಯವನಿಗಾಗಿ ಕೈ ಮೇಲೆ ಕೈ ಹಾಕಿ ಹೊಣೆಯಾದವನು ಬುದ್ಧಿಹೀನನೇ ಸರಿ.


ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಸುತ್ತಣವರೆಲ್ಲರು ಭಯಂಕರನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.


ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಬೆರೋದಕಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದನೆಂದು ಕೇಳಿ ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ ಬಹುಮಾನವನ್ನೂ ಕಳುಹಿಸಿದನು.


ಇದಲ್ಲದೆ ಆಹಾಜನು ಯೆಹೋವನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಇದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.


ಅವನಿಗೆ - ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವದೋ ಇಲ್ಲವೋ ಎಂಬದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು ಎಂದು ಆಜ್ಞಾಪಿಸಿದನು.


ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಿರುತ್ತದಲ್ಲಾ; ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲ್ಯರ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು ಎಂದು ಹೇಳಿಸಿದನು.


ಅವರೆಲ್ಲರೂ ಅವನಿಗೆ ವರುಷ ವರುಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂದದ್ರವ್ಯ, ಕುದುರೆ, ಹೇಸರಕತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ಪ್ರತಿವರುಷ ಆರುನೂರರುವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.


ಸೊಲೊಮೋನನು ಯೂಫ್ರೇಟೀಸ್‍ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕೊಡುತ್ತಿದ್ದರು.


ನಿನ್ನ ದಾಸಿಯು ತಂದ ಈ ಕಾಣಿಕೆಯು ಸ್ವಾವಿುಯ ಸೇವಕರಿಗೆ ಸಲ್ಲಲಿ.


ವರುಷ ವರುಷಕ್ಕೂ ತಿಂಗಳು ತಿಂಗಳಿಗೂ ಆಗುವ ಬೆಳೆ,


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿ ಬಿಡುವಂತೆ ಸರ್ವಶಕ್ತನಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳಕೊಂಡವನಾಗಬೇಕಾದರೆ ಹಾಗೆಯೇ ಆಗಲಿ ಎಂದು ಹೇಳಿದನು.


ಯಾಕೋಬನು - ಹಾಗೆ ಅಪ್ಪಣೆಕೊಡಕೂಡದು; ನೀನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ.


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.


ನಾವು ತಡಮಾಡದಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಎಂದು ಹೇಳಿದನು.


ಆ ಮನುಷ್ಯರು ಆ ಕಾಣಿಕೆಯ ವಸ್ತುಗಳನ್ನು ಸಿದ್ಧಪಡಿಸಿ ಎರಡರಷ್ಟು ಹಣವನ್ನು ತೆಗೆದುಕೊಂಡು ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟು ಐಗುಪ್ತದೇಶಕ್ಕೆ ಸೇರಿ ಯೋಸೇಫನೆದುರಿನಲ್ಲಿ ನಿಂತುಕೊಂಡರು.


ತಾವು ಅಲ್ಲೇ ಊಟ ಮಾಡಬೇಕೆಂಬುವ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡು ಯೋಸೇಫನು ಮಧ್ಯಾಹ್ನದಲ್ಲಿ ಬರುವ ತನಕ ಕಾದು ಕೊಂಡಿದ್ದರು.


ಯೋಸೇಫನು ಮನೆಗೆ ಬಂದಾಗ ಅವರು ಕಾಣಿಕೆಯನ್ನು ಮನೆಯೊಳಕ್ಕೆ ತಂದುಕೊಟ್ಟು ಅವನ ಮುಂದೆ ಅಡ್ಡಬಿದ್ದರು.


ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ ಮುಖ್ಯ ಮುಖ್ಯ ಸುಗಂಧದ್ರವ್ಯ ಸಮಾಸ್ತಾಮೂಲ್ಯರತ್ನ ಈ ಸರಕುಗಳನ್ನು ನಿನಗೋಸ್ಕರ ತಂದರು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು