Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:14 - ಕನ್ನಡ ಸತ್ಯವೇದವು J.V. (BSI)

14 ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿ ಬಿಡುವಂತೆ ಸರ್ವಶಕ್ತನಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳಕೊಂಡವನಾಗಬೇಕಾದರೆ ಹಾಗೆಯೇ ಆಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:14
30 ತಿಳಿವುಗಳ ಹೋಲಿಕೆ  

ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಅವನು ಒಡಂಬಡದೆ ಇದ್ದದರಿಂದ ಕರ್ತನ ಚಿತ್ತವಿದ್ದಂತೆ ಆಗಲಿ ಎಂದು ಹೇಳಿ ನಾವು ಸುಮ್ಮಗಾದೆವು.


ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು.


ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ; ನಿನ್ನ ನುಡಿಗನುಸಾರವಾಗಿ ರಕ್ಷಣೆಯುಂಟಾಗಲಿ.


ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. ಯೆಹೋವನ ಬೆಟ್ಟದಲ್ಲಿ ಒದಗುವದು ಎಂಬದಾಗಿ ಇಂದಿನವರೆಗೂ ಹೇಳುವದುಂಟಲ್ಲಾ.


ತಂದೆಯಾದ ದೇವರಿಂದಲೂ ಆ ತಂದೆಯ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮೊಂದಿಗಿರುವವು.


ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘಶಾಂತಿಯನ್ನು ತೋರ್ಪಡಿಸಿದನು.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ತಲತಲಾಂತರದವರೆಗೂ ಇರುವದು.


ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ.


ಇಸ್ರಾಯೇಲ್ಯರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು.


[ಎಜ್ರನು ಹೇಳಿದ್ದು - ] ನಮ್ಮ ಪಿತೃಗಳ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇವಿುನಲ್ಲಿರುವ ಯೆಹೋವನ ಆಲಯವನ್ನು ಶೋಭಿಸುವ ಸ್ಥಿತಿಗೆ ತರುವದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸು ಮಾಡಿದ್ದಾನೆ;


ಆಗ ಅವರ ತಂದೆಯಾದ ಯಾಕೋಬನು ಅವರಿಗೆ - ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ; ಬೆನ್ಯಾಮೀನನನ್ನೂ ಕರಕೊಂಡು ಹೋಗಬೇಕೆಂದಿದ್ದೀರಿ, ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂತು ಎಂದು ಹೇಳಲು ರೂಬೇನನು ಅವನಿಗೆ -


ಯೋಸೇಫನಾದರೋ ಅವರ ಬಳಿಯಿಂದ ಒಂದು ಕಡೆಗೆ ಹೋಗಿ ಕಣ್ಣೀರು ಸುರಿಸಿದನು. ತರುವಾಯ ಅವರ ಬಳಿಗೆ ತಿರಿಗಿ ಬಂದು ಅವರ ಸಂಗಡ ಮಾತಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಾಗಿ ಅವನಿಗೆ ಬೇಡಿಗಳನ್ನು ಹಾಕಿಸಿದನು.


ಆದರೂ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕೃಪೆಯನ್ನಿಟ್ಟು ಅವನಿಗೆ ಸೆರೆಯಜಮಾನನ ಬಳಿಯಲ್ಲಿ ದಯೆದೊರಕುವಂತೆ ಮಾಡಿದನು.


ಇದಲ್ಲದೆ ನಾನು ಸರ್ವಶಕ್ತನಾದ ದೇವರು. ನೀನು ಬಹು ಸಂತಾನವುಳ್ಳವನಾಗಿ ಹೆಚ್ಚು. ನಿನ್ನಿಂದ ಜನಾಂಗವುಂಟಾಗುವದು; ಅನೇಕ ಜನಾಂಗಗಳೂ ಅರಸರೂ ನಿನ್ನಿಂದ ಹುಟ್ಟುವರು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ಅನುಗ್ರಹಿಸು.


ಅದಕ್ಕೆ ಪಿಲಾತನು - ನಾನು ಬರೆದದ್ದು ಬರೆದಾಯಿತು ಅಂದನು.


ನಿಮ್ಮ ತಮ್ಮನನ್ನೂ ಕರೆದುಕೊಂಡು ಹೊರಟು ತಿರಿಗಿ ಆ ಮನುಷ್ಯನ ಬಳಿಗೆ ಹೋಗಿರಿ.


ಅವರನ್ನು ಸೆರೆಯೊಯ್ದವರಲ್ಲಿ ಅವರ ಮೇಲೆ ದಯೆಹುಟ್ಟಿಸಿದನು.


ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು