Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:2 - ಕನ್ನಡ ಸತ್ಯವೇದವು J.V. (BSI)

2 ಅವರು ಐಗುಪ್ತದೇಶದಿಂದ ತಂದಿದ್ದ ದವಸವು ಮುಗಿದನಂತರ ಅವರ ತಂದೆಯು ಅವರಿಗೆ - ನೀವು ತಿರಿಗಿ ಹೋಗಿ ಇನ್ನು ಸ್ವಲ್ಪ ಧಾನ್ಯವನ್ನು ಕೊಂಡುಕೊಂಡು ಬನ್ನಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, “ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈಜಿಪ್ಟಿನಿಂದ ತಂದ ದವಸಧಾನ್ಯ ಮುಗಿದು ಹೋಗಿತ್ತು. ಯಕೋಬನು ತನ್ನ ಪುತ್ರರಿಗೆ, ” ನೀವು ಪುನಃ ಹೋಗಿ ಸ್ವಲ್ಪ ಧಾನ್ಯವನ್ನು ಕೊಂಡುಕೊಂಡು ಬನ್ನಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು ಈಜಿಪ್ಟಿನಿಂದ ತಂದಿದ್ದ ದವಸಧಾನ್ಯಗಳನ್ನೆಲ್ಲ ಊಟ ಮಾಡಿದರು. ದವಸಧಾನ್ಯಗಳು ಮುಗಿದು ಹೋದಾಗ ಯಾಕೋಬನು, ತನ್ನ ಗಂಡುಮಕ್ಕಳಿಗೆ, “ಈಜಿಪ್ಟಿಗೆ ಮತ್ತೆ ಹೋಗಿ ನಮಗೆ ಊಟಕ್ಕೆ ದವಸಧಾನ್ಯಗಳನ್ನು ಕೊಂಡುಕೊಂಡು ಬನ್ನಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಈಜಿಪ್ಟಿನಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ, “ತಿರುಗಿ ಹೋಗಿ ನಮಗಾಗಿ ಸ್ವಲ್ಪ ಆಹಾರ ಕೊಂಡುಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:2
11 ತಿಳಿವುಗಳ ಹೋಲಿಕೆ  

ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕಡೆಯಾದವನೂ ಆಗಿದ್ದಾನೆ.


ಹೊಲವನ್ನು ನೋಡಿ, ಯೋಚಿಸಿ ಕೊಂಡುಕೊಳ್ಳುವಳು; ತನ್ನ ಕೈಗೆಲಸದ ಲಾಭದಿಂದ ತೋಟಮಾಡಿಸುವಳು.


ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು.


ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪಧನವೇ ಲೇಸು.


ಅಯ್ಯಾ, ಮೊದಲು ಒಂದು ಸಾರಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೆವು;


ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ ನಿನಗೆ ಧಾನ್ಯವನ್ನು ಕೊಂಡುಕೊಂಡು ಬರುತ್ತೇವೆ;


ಆ ದೇಶದಲ್ಲಿ ಬರವು ಬಹುಘೋರವಾಗಿತ್ತು.


ಅದಕ್ಕೆ ಯೆಹೂದನು - ಆ ಮನುಷ್ಯನು ನಮಗೆ, ನಿಮ್ಮ ತಮ್ಮನನ್ನು ಕರಕೊಂಡುಬಂದ ಹೊರತು ನನ್ನ ಮುಖವನ್ನು ನೋಡಕೂಡದು ಎಂದು ಖಂಡಿತವಾಗಿ ಹೇಳಿದನಲ್ಲಾ.


ನಮ್ಮ ತಂದೆ - ನೀವು ತಿರಿಗಿ ಹೋಗಿ ನಮಗೆ ಧಾನ್ಯವನ್ನು ಕೊಂಡುಕೊಂಡು ಬನ್ನಿರಿ ಎಂದು ಹೇಳಿದಾಗ ನಾವು ಆತನಿಗೆ - ಹೇಗೆ ಹೋಗುವದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು