25 ತಾವು ಅಲ್ಲೇ ಊಟ ಮಾಡಬೇಕೆಂಬುವ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡು ಯೋಸೇಫನು ಮಧ್ಯಾಹ್ನದಲ್ಲಿ ಬರುವ ತನಕ ಕಾದು ಕೊಂಡಿದ್ದರು.
25 ತಾವು ಅಲ್ಲೇ ಊಟಮಾಡಬೇಕೆಂಬ ಸಂಗತಿ ಅವರಿಗೆ ತಿಳಿಯಿತು. ಆದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡರು. ಜೋಸೆಫನು ಬರುವ ತನಕ, ಮಧ್ಯಾಹ್ನದವರೆಗೆ ಕಾದುಕೊಂಡಿದ್ದರು.
ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.
ಬೆನ್ಯಾಮೀನನು ಅವರ ಸಂಗಡ ಇರುವದನ್ನು ಯೋಸೇಫನು ಕಂಡು ತನ್ನ ಮನೆವಾರ್ತೆಯವನನ್ನು ಕರಸಿ - ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟಮಾಡಬೇಕಾಗಿದೆ; ಇವರನ್ನು ಮನೆಯೊಳಗೆ ಕರೆದುಕೊಂಡು ಹೋಗಿ ಪಶುವನ್ನು ಕೊಯಿಸಿ ಎಲ್ಲಾ ಸಿದ್ಧಪಡಿಸು ಎಂದು ಅಪ್ಪಣೆಕೊಟ್ಟನು.
ಆ ಮನುಷ್ಯರು ಆ ಕಾಣಿಕೆಯ ವಸ್ತುಗಳನ್ನು ಸಿದ್ಧಪಡಿಸಿ ಎರಡರಷ್ಟು ಹಣವನ್ನು ತೆಗೆದುಕೊಂಡು ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟು ಐಗುಪ್ತದೇಶಕ್ಕೆ ಸೇರಿ ಯೋಸೇಫನೆದುರಿನಲ್ಲಿ ನಿಂತುಕೊಂಡರು.