ಆದಿಕಾಂಡ 43:26 - ಕನ್ನಡ ಸತ್ಯವೇದವು J.V. (BSI)26 ಯೋಸೇಫನು ಮನೆಗೆ ಬಂದಾಗ ಅವರು ಕಾಣಿಕೆಯನ್ನು ಮನೆಯೊಳಕ್ಕೆ ತಂದುಕೊಟ್ಟು ಅವನ ಮುಂದೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಜೋಸೆಫನು ಮನೆಗೆ ಬಂದಾಗ ಅವರು ಅವನಿಗೆ ಕಾಣಿಕೆಯನ್ನು ತಂದುಕೊಟ್ಟು, ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೋಸೇಫನು ಮನೆಗೆ ಬಂದಾಗ, ಸಹೋದರರು ತಾವು ತಂದಿದ್ದ ಉಡುಗೊರೆಗಳನ್ನು ಅವನಿಗೆ ಕೊಟ್ಟರು. ಬಳಿಕ ಅವರು ನೆಲದವರೆಗೆ ಬಾಗಿ ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೋಸೇಫನು ಮನೆಗೆ ಬಂದ ಮೇಲೆ, ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತೆಗೆದುಕೊಂಡು ಬಂದು, ಅವನಿಗೆ ನೆಲದವರೆಗೂ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿ |
ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.