ಆದಿಕಾಂಡ 43:34 - ಕನ್ನಡ ಸತ್ಯವೇದವು J.V. (BSI)34 ಯೋಸೇಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳುಹಿಸಿದನು; ಆದರೆ ಬೆನ್ಯಾಮೀನನಿಗೆ ಬಂದ ಭಾಗವು ವಿುಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಫವಾಗಿ ಪಾನಮಾಡಿ ಅವನ ಸಂಗಡ ಸಂಭ್ರಮದಿಂದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಜೋಸೆಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳಿಸಿದನು. ಬೆನ್ಯಾಮೀನನಿಗೆ ಬಂದ ಭಾಗವಾದರೋ ಮಿಕ್ಕವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಛವಾಗಿ ಪಾನಮಾಡಿ ಜೋಸೆಫನ ಸಂಗಡ ಸಂಭ್ರಮದಿಂದಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಸೇವಕರು ಯೋಸೇಫನ ಮೇಜಿನಿಂದ ಊಟವನ್ನು ತೆಗೆದುಕೊಂಡು ಅವರಿಗೆ ಬಡಿಸುತ್ತಿದ್ದರು. ಆದರೆ ಸೇವಕರು ಬೆನ್ಯಾಮೀನನಿಗೆ ಬೇರೆಯವರಿಗಿಂತ ಐದರಷ್ಟು ಹೆಚ್ಚಾಗಿ ಕೊಟ್ಟರು. ಸಹೋದರರು ಯಥೇಚ್ಛವಾಗಿ ಊಟ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು ಮತ್ತು ಅವರು ಅವನ ಸಂಗಡ ಕುಡಿದು ಸಂತೋಷದಿಂದಿದ್ದರು. ಅಧ್ಯಾಯವನ್ನು ನೋಡಿ |