ಆದಿಕಾಂಡ 43:8 - ಕನ್ನಡ ಸತ್ಯವೇದವು J.V. (BSI)8 ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ - ನೀನೂ ನಾವೂ ನಮ್ಮ ಮಕ್ಕಳೂ ಎಲ್ಲರೂ ಸಾಯದೆ ಬದುಕಿಕೊಳ್ಳುವಂತೆ ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡಪ್ಪಾ; ನಾವು ಹೊರಟು ಹೋಗುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡು, ನಾವು ಹೋಗುವೆವು. ಆಗ ನೀನೂ, ನಾವು ಮತ್ತು ನಮ್ಮ ಮಕ್ಕಳೂ ಸಾಯದೆ ಬದುಕುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಯೆಹೂದನು ತನ್ನ ತಂದೆ ಯಕೋಬನಿಗೆ, “ನೀವು, ನಾವು ಮತ್ತು ನಮ್ಮ ಮಕ್ಕಳು, ಎಲ್ಲರೂ ಸಾಯದೆ ಉಳಿಯಬೇಕಾದರೆ ಆ ಹುಡುಗನನ್ನು ನನ್ನ ಜೊತೆ ಕಳಿಸಿಕೊಡಿ, ನಾವು ಇದೀಗಲೆ ಹೊರಡುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಮೇಲೆ ಯೆಹೂದನು ತನ್ನ ತಂದೆಯಾದ ಇಸ್ರೇಲನಿಗೆ, “ನನ್ನೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡು. ನಾನು ಅವನನ್ನು ನೋಡಿಕೊಳ್ಳುವೆನು. ನಾವು ಈಜಿಪ್ಟಿಗೆ ಹೋಗಿ ಆಹಾರವನ್ನು ತರಬೇಕು. ಇಲ್ಲವಾದರೆ ನಾವೂ ಸಾಯುವೆವು, ನಮ್ಮ ಮಕ್ಕಳೂ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೂದನು ತನ್ನ ತಂದೆ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಸಂಗಡ ಕಳುಹಿಸು, ಆಗ ನಾವು ಹೋಗುವೆವು. ನಾವು, ನೀನೂ ಮತ್ತು ನಮ್ಮ ಮಕ್ಕಳು ಸಾಯದೆ ಬದುಕುವೆವು. ಅಧ್ಯಾಯವನ್ನು ನೋಡಿ |