Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:30 - ಕನ್ನಡ ಸತ್ಯವೇದವು J.V. (BSI)

30 ನಮ್ಮ ತಂದೆಯ ಪ್ರಾಣವೂ ಇವನ ಪ್ರಾಣವೂ ಒಂದೇಯಾಗಿರುವದರಿಂದ ನಾನು ನಿನ್ನ ಸೇವಕನಾದ ನನ್ನ ತಂದೆಯ ಬಳಿಗೆ ಸೇರಿದಾಗ ಈ ಹುಡುಗನು ಸಂಗಡ ಇಲ್ಲದೆ ಹೋದರೆ ಹುಡುಗನು ಬರಲಿಲ್ಲವೆಂದು ಅವನು ತಿಳಿದಕೂಡಲೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “ನಮ್ಮ ತಂದೆಯ ಪ್ರಾಣವು ಇವನ ಪ್ರಾಣವು ಒಂದೇ ಆಗಿರುವುದರಿಂದ ನಾವು ನಿನ್ನ ಸೇವಕನಾದ ನಮ್ಮ ತಂದೆಯ ಬಳಿಗೆ ಹೋದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 "ತಮ್ಮ ಸೇವಕರಾದ ನನ್ನ ತಂದೆಯ ಬಳಿಗೆ ನಾನು ಸೇರಿದಾಗ, ಅವರ ಪ್ರಾಣದ ಪ್ರಾಣವಾಗಿರುವ ಈ ಹುಡುಗ ನನ್ನ ಸಂಗಡ ಇಲ್ಲದೆ ಹೋದರೆ, ಹುಡುಗ ಬರಲಿಲ್ಲವೆಂದು ಅವರು ಕೂಡಲೆ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಮ್ಮ ತಂದೆಗಂತೂ ಇವನನ್ನು ಕಂಡರೆ ಪ್ರಾಣಪ್ರೀತಿ. ಆದ್ದರಿಂದ ನಮ್ಮ ಈ ಕಿರಿಯ ತಮ್ಮನಿಲ್ಲದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದಲ್ಲಿ ನೆಟ್ಟಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:30
8 ತಿಳಿವುಗಳ ಹೋಲಿಕೆ  

ದಾವೀದನು ಸೌಲನೊಡನೆ ಮಾತಾಡಿ ತೀರಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ಇವನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


ಇದನ್ನು ಕೇಳಿ ಅರಸನು ಎದೆಯೊಡೆದವನಾಗಿ - ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಕೂಗಿ ಅಳುತ್ತಾ ಹೆಬ್ಬಾಗಲಿನ ಮೇಲಿರುವ ಕೋಣೆಗೆ ಹೋದನು.


ಯಾವನಾದರೂ ನನ್ನ ಸ್ವಾವಿುಯಾದ ನಿನ್ನನ್ನು ಹಿಂಸಿಸಿ ಜೀವತಗೆಯಬೇಕೆಂದಿರುವಾಗ ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಭದ್ರವಾಗಿರಲಿ; ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.


ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗುವದಕ್ಕಾದೀತು? ತಂದೆಗೆ ಮಹಾ ಶೋಕವುಂಟಾಗುವದನ್ನು ನಾನು ನೋಡಕೂಡದು ಅಂದನು.


ಹೀಗೆ ಸ್ವಾವಿುಯ ಸೇವಕರಾದ ನಾವು ನಿನ್ನ ಸೇವಕನಾದ ನಮ್ಮ ತಂದೆಯ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ಕಾರಣರಾಗುವೆವು.


ಹಾಗೆ ಎಂದಿಗೂ ಆಗಬಾರದು; ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು ಅಂದನು.


ತಂದೆಯಿದ್ದಾನೆ, ಅವನು ಮುದುಕನು; ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಹುಡುಗನೂ ಇದ್ದಾನೆ. ಅವನ ಒಡಹುಟ್ಟಿದವನು ಸತ್ತು ಹೋದನು; ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ, ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು ಎಂದು ಹೇಳಿದೆವು.


ನಾವು ಸ್ವಾವಿುಯವರಿಗೆ - ಆ ಹುಡುಗನು ತನ್ನ ತಂದೆಯನ್ನು ಅಗಲುವದಕ್ಕಾಗುವದಿಲ್ಲ; ಅಗಲಿದರೆ ತಂದೆ ಸತ್ತಾನು ಅಂದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು