Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:33 - ಕನ್ನಡ ಸತ್ಯವೇದವು J.V. (BSI)

33 ಆದದರಿಂದ ಸೇವಕನಾದ ನಾನು ಈ ಹುಡುಗನಿಗೆ ಬದಲಾಗಿ ಸ್ವಾವಿುಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 “ಆದುದರಿಂದ ಸೇವಕನಾದ ನಾನು ಈ ಹುಡುಗನ ಬದಲಾಗಿ ಸ್ವಾಮಿಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆದುದರಿಂದ ತಮ್ಮಲ್ಲಿ ನಾನು ಮಾಡುವ ಪ್ರಾರ್ಥನೆ ಇದು; ಈ ಹುಡುಗನಿಗೆ ಬದಲಾಗಿ, ತಮ್ಮ ಸೇವಕನಾದ ನನ್ನನ್ನು ತಮ್ಮ ಗುಲಾಮನನ್ನಾಗಿ ಇರಿಸಿಕೊಳ್ಳಿ; ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆ ಅನುಗ್ರಹಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದ್ದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ಈ ಯುವಕನು ತನ್ನ ಸಹೋದರರೊಂದಿಗೆ ಹಿಂತಿರುಗಿ ಹೋಗಲಿ; ನಾನು ಇಲ್ಲಿ ನಿಮಗೆ ಗುಲಾಮನಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಹಾಗಿದ್ದಲ್ಲಿ ಆ ಹುಡುಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು. ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:33
9 ತಿಳಿವುಗಳ ಹೋಲಿಕೆ  

ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದರಲ್ಲಿಯೇ ಪ್ರೀತಿ ಇಂಥದೆಂದು ನಮಗೆ ತಿಳಿದು ಬಂದದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ಯೇಸು ಆಣೆಯೊಡನೆಯೇ ಯಾಜಕನಾದದರಿಂದ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.


ಶರೀರಸಂಬಂಧವಾಗಿ ಸ್ವಜನರಾಗಿರುವ ನನ್ನ ಸಹೋದರರಿಗೋಸ್ಕರ ನಾನೇ ಸಾಧ್ಯವಾದರೆ ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.


ಇಲ್ಲವಾದರೆ ನೀನು ಬರೆದಿರುವ [ಜೀವಿತರ] ಪಟ್ಟಿಯಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು.


ಸೇವಕನಾದ ನಾನು ನನ್ನ ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ - ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದಿದ್ದರೆ ತಂದೆಗೆ ತಪ್ಪಿದವನ ದೋಷ ಎಂದೆಂದಿಗೂ ನನಗಿರಲಿ ಎಂದು ಮಾತು ಕೊಟ್ಟೆನು.


ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗುವದಕ್ಕಾದೀತು? ತಂದೆಗೆ ಮಹಾ ಶೋಕವುಂಟಾಗುವದನ್ನು ನಾನು ನೋಡಕೂಡದು ಅಂದನು.


ಅದಕ್ಕೆ ಅವನು - ಒಳ್ಳೇದು, ನೀವು ಹೇಳಿದಂತೆ ಆಗಲಿ; ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ ಅವನು ನನಗೆ ದಾಸನಾಗಬೇಕು; ಉಳಿದವರು ತಪ್ಪಿಲ್ಲದವರು ಎಂದು ಹೇಳಿದಾಗ,


ದಾವೀದನು ಜನಸಂಹಾರಕದೂತನನ್ನು ಕಂಡಾಗ ಯೆಹೋವನಿಗೆ - ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು