Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:34 - ಕನ್ನಡ ಸತ್ಯವೇದವು J.V. (BSI)

34 ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗುವದಕ್ಕಾದೀತು? ತಂದೆಗೆ ಮಹಾ ಶೋಕವುಂಟಾಗುವದನ್ನು ನಾನು ನೋಡಕೂಡದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ತಾನೆ ಹೋಗಲಾದೀತು? ತಂದೆಗೆ ಉಂಟಾಗುವ ಮನೋಯಾತನೆಯನ್ನು ನನ್ನಿಂದ ನೋಡಲಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನನ್ನ ಜೊತೆಯಲ್ಲಿ ಈ ಹುಡುಗನಿಲ್ಲದೆ ನಾನು ನನ್ನ ತಂದೆಯ ಬಳಿಗೆ ಹಿಂತಿರುಗಿ ಹೋಗಲು ಸಾಧ್ಯವಿಲ್ಲ. ನಮ್ಮ ತಂದೆಗೆ ಸಂಭವಿಸುವುದನ್ನು ನೋಡಲು ನನಗೆ ತುಂಬ ಭಯವಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಹುಡುಗನು ನನ್ನ ಬಳಿಯಲ್ಲಿರದೆ, ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡಬೇಕಾದೀತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:34
10 ತಿಳಿವುಗಳ ಹೋಲಿಕೆ  

ನನ್ನ ಜನರಿಗೆ ಕೇಡು ಸಂಭವಿಸುವದನ್ನು ನೋಡಿ ನಾನು ಸಹಿಸುವದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವದು ಹೇಗೆ ಎಂದು ಬಿನ್ನವಿಸಿದಳು.


ಕಷ್ಟಸಂಕಟಗಳು ನನ್ನನ್ನು ಹಿಡಿದವೆ; ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ.


ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.


ನನ್ನನ್ನು ದ್ವೇಷಿಸುವವನಿಗೆ ಕೇಡುಬಂದಾಗ ಉಬ್ಬಿಕೊಂಡು ಅವನ ನಾಶನಕ್ಕೆ ಹಿಗ್ಗಿದೆನೋ?


ನಾನು ಈ ದೇಶದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿಸೇರುವಂತೆ ಅನುಗ್ರಹಿಸುವೆನು ಎಂಬದೇ ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ತರುವಾಯ ಮೋಶೆಯು - ಯೆಹೋವನು ಇಸ್ರಾಯೇಲ್ಯರಿಗೋಸ್ಕರ ಫರೋಹನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ಮಾವನಿಗೆ ವಿವರಿಸಲಾಗಿ


ಆದದರಿಂದ ಸೇವಕನಾದ ನಾನು ಈ ಹುಡುಗನಿಗೆ ಬದಲಾಗಿ ಸ್ವಾವಿುಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.


ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಲಾರದೆ - ನನ್ನ ಬಳಿಯಿಂದ ಎಲ್ಲರನ್ನೂ ಆಚೆಗೆ ಕಳುಹಿಸಿರಿ ಎಂದು ಬಾಯಿಬಿಟ್ಟು ಹೇಳಿದನು. ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಇತರರು ಯಾರೂ ಹತ್ತರ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು