Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:7 - ಕನ್ನಡ ಸತ್ಯವೇದವು J.V. (BSI)

7 ಅವರು ಅವನಿಗೆ - ನಮ್ಮ ಸ್ವಾವಿುಯು ಇಂಥಾ ಮಾತುಗಳನ್ನು ಹೇಳುವದೇನು! ನಿನ್ನ ಸೇವಕರು ಇಂಥ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಅವನಿಗೆ, “ನಮ್ಮ ಒಡೆಯನೇ, ಇಂಥಾ ಮಾತುಗಳನ್ನು ಹೇಳುವುದೇನು? ನಿನ್ನ ಸೇವಕರು ಇಂಥಾ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದಕ್ಕೆ ಅವರು, “ಅಯ್ಯಾ, ನೀವು ಇಂಥಾ ಮಾತುಗಳನ್ನು ಆಡಬಹುದೆ! ನಿಮ್ಮ ಸೇವಕರಾದ ನಾವು ಇಂಥ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಸಹೋದರರು ಸೇವಕನಿಗೆ, “ರಾಜ್ಯಪಾಲನು ಈ ರೀತಿ ಹೇಳುವುದೇಕೆ? ನಾವು ಇಂಥಾ ಕೃತ್ಯವನ್ನು ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅವರು ಅವನಿಗೆ, “ನಮ್ಮ ಒಡೆಯನು ಏಕೆ ಇಂಥ ಮಾತುಗಳನ್ನಾಡುತ್ತಾನೆ? ನಿನ್ನ ದಾಸರು ಹೀಗೆ ಮಾಡುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:7
12 ತಿಳಿವುಗಳ ಹೋಲಿಕೆ  

ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಮನಸ್ಸಿನಿಂದ ಒಳ್ಳೇ ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.


ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ;


ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿ ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.


ಹಜಾಯೇಲನು ಎಲೀಷನನ್ನು - ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೆ; ನನ್ನಿಂದ ಇಂಥ ಮಹಾಕಾರ್ಯವಾಗುವದು ಹೇಗೆ ಎಂದು ಕೇಳಲು ಅವನು - ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ ಅಂದನು.


ಅದಕ್ಕೆ ಯೋವಾಬನು - ನುಂಗಿಬಿಡುವದಾಗಲಿ ಹಾಳುಮಾಡುವದಾಗಲಿ ನನಗೆ ದೂರವಾಗಿರಲಿ; ಅಂಥದು ಬೇಡವೇ ಬೇಡ.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.


ಮನೆವಾರ್ತೆಯವನು ಅವರನ್ನು ಹಿಂದಟ್ಟಿ ಸಂಧಿಸಿ ಅವರಿಗೆ ಆ ಮಾತುಗಳನ್ನು ಹೇಳಿದಾಗ


ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್‍ದೇಶದಿಂದ ತಿರಿಗಿ ತಂದು ನಿನಗೆ ಕೊಟ್ಟೆವಲ್ಲವೇ. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು