Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:8 - ಕನ್ನಡ ಸತ್ಯವೇದವು J.V. (BSI)

8 ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್‍ದೇಶದಿಂದ ತಿರಿಗಿ ತಂದು ನಿನಗೆ ಕೊಟ್ಟೆವಲ್ಲವೇ. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮೊದಲು ನಮ್ಮ ಚೀಲಗಳ ಬಾಯಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ನಾಡಿನಿಂದ ವಾಪಸ್ಸು ತಂದು ನಿಮಗೆ ಕೊಟ್ಟೆವಲ್ಲವೆ? ಹೀಗಿರುವಾಗ ನಾವು ನಿಮ್ಮ ದಣಿಯ ಮನೆಯೊಳಗಿಂದ ಬೆಳ್ಳಿಬಂಗಾರ ಕದಿಯುವುದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮೊದಲು ನಮ್ಮ ಚೀಲಗಳಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ಮತ್ತೆ ತಂದುಕೊಟ್ಟೆವು. ಆದ್ದರಿಂದ ಖಂಡಿತವಾಗಿ ನಾವು ನಿನ್ನ ಒಡೆಯನ ಮನೆಯಿಂದ ಬೆಳ್ಳಿಯನ್ನಾಗಲಿ ಬಂಗಾರವನ್ನಾಗಲಿ ಕದ್ದುಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವುದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:8
12 ತಿಳಿವುಗಳ ಹೋಲಿಕೆ  

ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.


ಅವನು - ಅವು ಯಾವವು ಎಂದು ಕೇಳಲು ಯೇಸು - ನರಹತ್ಯಮಾಡಬಾರದು; ವ್ಯಭಿಚಾರಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು;


ಅವರು ಅವನಿಗೆ - ನಮ್ಮ ಸ್ವಾವಿುಯು ಇಂಥಾ ಮಾತುಗಳನ್ನು ಹೇಳುವದೇನು! ನಿನ್ನ ಸೇವಕರು ಇಂಥ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.


ಅದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ತೆಗೆದುಕೊಂಡು ಹೋಗಿರಿ; ಒಂದು ವೇಳೆ ಅದು ಅವರಿಗೆ ತಿಳಿಯದೆ ನಿಮ್ಮ ಕೈಗೆ ಬಂದಿರಬಹುದು.


ಅವರು ತಮ್ಮ ಚೀಲಗಳನ್ನು ಬಿಚ್ಚಿನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವನವನ ಹಣದ ಗಂಟು ಸಿಕ್ಕಿತು. ಅವರೂ ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.


ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ದಾಣಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲೇ ತಾನು ತಂದಿದ್ದ ಹಣವನ್ನು ಕಂಡನು.


ಆದರೆ ಅವರು ತಮ್ಮತಮ್ಮೊಳಗೆ - ನಾವು ನಮ್ಮ ತಮ್ಮನಿಗೆ ಮಾಡಿದ್ದು ದ್ರೋಹವೇ ಸರಿ; ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ; ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ ಎಂದು ಮಾತಾಡಿಕೊಂಡರು.


ಮುಂಚೆ ನಾವು ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿವಿುತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ನಮ್ಮ ಮೇಲೆ ಫಕ್ಕನೆ ಬಿದ್ದು ನಮ್ಮನ್ನು ಕತ್ತೆಗಳ ಸಹಿತವಾಗಿ ಹಿಡಿಸಿ ಗುಲಾಮರನ್ನಾಗಿ ಮಾಡಿಕೊಳ್ಳಬೇಕೆಂದಿದ್ದಾನೆ ಎಂಬದಾಗಿ ತಮ್ಮ ತಮ್ಮೊಳಗೆ ಮಾತಾಡಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು