ಆದಿಕಾಂಡ 45:11 - ಕನ್ನಡ ಸತ್ಯವೇದವು J.V. (BSI)11 ಈ ಬರಗಾಲ ತೀರುವದಕ್ಕೆ ಇನ್ನೂ ಐದು ವರುಷ ಹೋಗಬೇಕು; ಆದದರಿಂದ ನಿನಗೂ ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು ಹೇಳುತ್ತಾನೆಂಬದಾಗಿ ತಿಳಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬರಗಾಲ ತೀರುವುದಕ್ಕೆ ಇನ್ನೂ ಐದು ವರ್ಷ ಕಳೆಯಬೇಕಾಗಿದೆ. ಆದುದರಿಂದ ನಿಮಗೂ ನಿಮ್ಮ ಕುಟುಂಬಕ್ಕೂ ನಿಮಗಿರುವ ಸಮಸ್ತಕ್ಕೂ ಬಡತನ ತಟ್ಟದಂತೆ ನಾನು ನಿಮ್ಮನ್ನು ಪೋಷಿಸುತ್ತೇನೆ’, ಎಂದು ಹೇಳಿರುವುದಾಗಿ ತಿಳಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಮುಂದಿನ ಐದು ವರ್ಷಗಳ ಬರಗಾಲದಲ್ಲಿ ನಾನು ನಿಮ್ಮನ್ನು ಪೋಷಿಸುವೆನು. ಆಗ ನಿನಗಾಗಲಿ ನಿನ್ನ ಕುಟುಂಬದವರಿಗಾಗಲಿ ಬಡತನವಿರುವುದಿಲ್ಲ’ ಎಂಬುದಾಗಿ ತಿಳಿಸಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಲ್ಲಿ ನಿನ್ನನ್ನು ಪೋಷಿಸುವೆನು. ಏಕೆಂದರೆ ಇನ್ನೂ ಕ್ಷಾಮದ ಐದು ವರ್ಷಗಳಿವೆ. ನಿನಗೂ, ನಿನ್ನ ಮನೆಗೂ, ನಿನಗಿರುವುದೆಲ್ಲದಕ್ಕೂ ಬಡತನವಾಗಬಾರದು’ ಎಂದು ಹೇಳಿರಿ. ಅಧ್ಯಾಯವನ್ನು ನೋಡಿ |