ಆದಿಕಾಂಡ 45:20 - ಕನ್ನಡ ಸತ್ಯವೇದವು J.V. (BSI)20 ಐಗುಪ್ತದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮ ಪಾಲಿಗೆ ಬಂದದರಿಂದ ನಿಮಗಿರುವ ಸೊತ್ತಿನ ವಿಷಯ ಚಿಂತೆಪಡಬೇಕಾದ ಅವಶ್ಯವಿಲ್ಲ ಎಂಬದೇ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಚಿಂತಿಸಬೇಕಾಗಿಲ್ಲ. ಈಜಿಪ್ಟ್ ದೇಶದ ಅತ್ಯುತ್ತಮವಾದುವುಗಳು ನಿಮ್ಮದಾಗುವುವು'." ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವರ ಸ್ವತ್ತುಗಳ ಬಗ್ಗೆ ಚಿಂತಿಸುವುದು ಬೇಡ; ಈಜಿಪ್ಟಿನಲ್ಲಿ ನಮಗಿರುವ ಉತ್ತಮವಾದವುಗಳನ್ನು ಅವರಿಗೆ ಕೊಡೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಈಜಿಪ್ಟ್ ದೇಶದಲ್ಲಿರುವ ಉತ್ತಮವಾದದ್ದೆಲ್ಲಾ ನಿಮ್ಮದೇ,’ ” ಎಂದನು. ಅಧ್ಯಾಯವನ್ನು ನೋಡಿ |
ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ತ್ಯವನ್ನಾಗಿ ಬಿಡುವಿರಿ ಎಂದು ಹೇಳಿದಿಯಲ್ಲಾ.