Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:27 - ಕನ್ನಡ ಸತ್ಯವೇದವು J.V. (BSI)

27 ತರುವಾಯ ಯೋಸೇಫನು ಹೇಳಿಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿ ಇಸ್ರಾಯೇಲನೆನಿಸಿಕೊಳ್ಳುವ ಅವರ ತಂದೆ ಯಾಕೋಬನು ಚೇತರಿಸಿಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದರೆ ಜೋಸೆಫನು ಹೇಳಿಕಳಿಸಿದ ಎಲ್ಲ ಮಾತುಗಳನ್ನು ಕೇಳಿ, ತನ್ನ ಪ್ರಯಾಣಕ್ಕಾಗಿ ಅವನಿಂದ ಬಂದಿದ್ದ ಬಂಡಿಗಳನ್ನು ನೋಡಿ ಅವರ ತಂದೆ ಯಕೋಬನಿಗೆ ಹೊಸ ಜೀವ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಯೋಸೇಫನು ತಮಗೆ ಹೇಳಿದ್ದೆಲ್ಲವನ್ನು ಸಹೋದರರು ತಮ್ಮ ತಂದೆಗೆ ಹೇಳಿದರು. ಆಮೇಲೆ ತನ್ನನ್ನು ಈಜಿಪ್ಟಿಗೆ ಕರೆದುಕೊಂಡು ಬರಲು ಯೋಸೇಫನು ಕಳುಹಿಸಿದ್ದ ರಥಗಳನ್ನು ಯಾಕೋಬನು ನೋಡಿ ಉಲ್ಲಾಸಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದರು. ಅವನನ್ನು ಕರೆದುಕೊಂಡು ಹೋಗುವುದಕ್ಕೆ ಯೋಸೇಫನು ಕಳುಹಿಸಿದ ರಥಗಳನ್ನು ಅವನು ನೋಡಿದಾಗ ಯಾಕೋಬನ ಆತ್ಮವು ಉಜ್ಜೀವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:27
8 ತಿಳಿವುಗಳ ಹೋಲಿಕೆ  

ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ ನೀನು ನಮ್ಮನ್ನು ಚೈತನ್ಯ ಪಡಿಸುವದಿಲ್ಲವೋ?


ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷೇಗೊಂಚಲುಗಳನ್ನೂ ಕೊಟ್ಟರು. ಮೂರು ದಿವಸ ಹಗಲಿರುಳು ಅನ್ನಪಾನವಿಲ್ಲದ್ದರಿಂದ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.


ಆತನು ಲೆಹೀಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಕುಡಿದು ಪುನಃ ಚೈತನ್ಯ ಹೊಂದಿದನು. ಆದದರಿಂದ ಅದಕ್ಕೆ ಏನ್‍ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನವರೆಗೂ ಲೆಹೀಯಲ್ಲಿರುತ್ತದೆ.


ಸಾಕು, ನನ್ನ ಮಗನಾದ ಯೋಸೇಫನು ಸಜೀವನಾಗಿದ್ದಾನೆ; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.


ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು