Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:6 - ಕನ್ನಡ ಸತ್ಯವೇದವು J.V. (BSI)

6 ದೇಶಕ್ಕೆ ಬರಬಂದು ಎರಡು ವರುಷವಾಗಿದೆಯಷ್ಟೆ; ಇನ್ನೂ ಐದು ವರುಷಗಳ ಪರ್ಯಂತರ ಬಿತ್ತುವದಕ್ಕಾಗಲಿ ಕೊಯ್ಯುವದಕ್ಕಾಗಲಿ ಅವಕಾಶವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇಶಕ್ಕೆ ಬರಗಾಲ ಬಂದು ಈಗಾಗಲೇ ಎರಡು ವರ್ಷಗಳಾದವು. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ ಕೊಯ್ಯುವುದಕ್ಕಾಗಲಿ ಅವಕಾಶವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ಭೀಕರವಾದ ಬರಗಾಲವು ಆರಂಭವಾಗಿ ಈಗಾಗಲೇ ಎರಡು ವರ್ಷಗಳಾಯಿತು. ಇನ್ನೂ ಐದು ವರ್ಷಗಳವರೆಗೆ ಬಿತ್ತನೆ ಇರುವುದಿಲ್ಲ; ಸುಗ್ಗಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಈ ಎರಡು ವರ್ಷಗಳವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರ್ಷಗಳವರೆಗೆ ಬಿತ್ತುವುದೂ, ಕೊಯ್ಯುವುದೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:6
13 ತಿಳಿವುಗಳ ಹೋಲಿಕೆ  

ಯೋಸೇಫನು ಪ್ರಜೆಗಳಿಗೆ - ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂವಿುಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂವಿುಯಲ್ಲಿ ಬಿತ್ತಿರಿ.


ಬರವು ಲೋಕದಲ್ಲೆಲ್ಲಾ ಹರಡಿಕೊಂಡಿರುವಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗಿಸಿ ಐಗುಪ್ತ್ಯರಿಗೆ ಧಾನ್ಯವನ್ನು ಮಾರಿಸಿದನು. ಐಗುಪ್ತದೇಶದಲ್ಲಿ ಬರವು ಬಹು ಘೋರವಾಗಿತ್ತು.


ಯೋಸೇಫನು ಹೇಳಿದ್ದ ಪ್ರಕಾರ ಕ್ಷಾಮದ ಏಳು ವರುಷಗಳಿಗೆ ಪ್ರಾರಂಭವಾಯಿತು. ಬರವು ಸುತ್ತಲಿದ್ದ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು; ಐಗುಪ್ತದೇಶದಲ್ಲಿ ಮಾತ್ರ ಆಹಾರ ದೊರಕುವದು.


ಹೊಲಗೇಯುವ ಎತ್ತುಕತ್ತೆಗಳು ಮೊರದಿಂದಲೂ ಕವೇಕೋಲಿನಿಂದಲೂ ತೂರಿದ ಉಪ್ಪುಪ್ಪಾದ ಮೇವನ್ನು ತಿನ್ನುವವು.


ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇವಿುಸುವನು. ಇನ್ನು ಕೆಲವರು ಅವನ ಭೂವಿುಯನ್ನು ಉಳುವವರೂ ಪೈರನ್ನು ಕೊಯ್ಯುವವರೂ ಯುದ್ಧಾಯುಧ, ರಥಸಾಹಿತ್ಯ ಇವುಗಳನ್ನು ಮಾಡುವವರೂ ಆಗಬೇಕು.


ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ಹೋಗಿ ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.


ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಉಳುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.


ಆ ವರುಷ ಕಳೆದನಂತರ ಅವರು ಎರಡನೆಯ ವರುಷದಲ್ಲಿ ಅವನ ಬಳಿಗೆ ಬಂದು - ನಮ್ಮ ಹಣವೆಲ್ಲಾ ವೆಚ್ಚವಾಗಿ ಹೋಗಿದೆ; ನಮ್ಮ ಕುರಿದನಗಳು ಸ್ವಾವಿುಯ ವಶವಾದವು; ಹೀಗಿರುವದರಿಂದ ನಮ್ಮ ಭೂವಿುಯೂ ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾವಿುಗೆ ಮರೆಮಾಜದೆ ತಿಳಿಸಬೇಕಾಯಿತು.


ಯಾಕೋಬನ ಮಕ್ಕಳ ಚರಿತ್ರೆ. ಯೋಸೇಫನು ಹದಿನೇಳು ವರುಷದವನಾಗಿ ಇನ್ನೂ ಹುಡುಗನಾಗಿದ್ದು ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ ತನ್ನ ಮಲತಾಯಿಗಳಾದ ಬಿಲ್ಹಾ, ಜಿಲ್ಪಾ ಎಂಬವರ ಮಕ್ಕಳ ಜೊತೆಯಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.


ಯೋಸೇಫನು ಐಗುಪ್ತದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರುಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚಾರ ಮಾಡಿದನು.


ಐಗುಪ್ತದೇಶದಲ್ಲಿ ಸುಭಿಕ್ಷದ ಏಳು ವರುಷಗಳು ಮುಗಿದ ಮೇಲೆ


ಅವರು ಮುಂದಣ ಒಳ್ಳೇ ವರುಷಗಳಲ್ಲಿ ಆಹಾರಪದಾರ್ಥಗಳನ್ನೂ ದವಸಧಾನ್ಯಗಳನ್ನೂ ಕೂಡಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಜೋಪಾನ ಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು