Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:7 - ಕನ್ನಡ ಸತ್ಯವೇದವು J.V. (BSI)

7 ನಿಮ್ಮ ಜನವು ಭೂವಿುಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಬಹುಜನವಾಗುವಂತೆಯೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ಸಂತತಿ ಭೂಮಿಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ, ಬಹು ಜನವಾಗುವಂತೆಯೂ ದೇವರು ನನ್ನನ್ನು ಮೊದಲು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ಜನ ಧರೆಯಲ್ಲಿ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಅಭಿವೃದ್ಧಿಯಾಗುವಂತೆಯೂ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಕಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಈ ದೇಶದಲ್ಲಿ ತನ್ನ ಜನರನ್ನು ಕಾಪಾಡಲು ದೇವರು ನನ್ನನ್ನು ನಿಮಗಿಂತ ಮೊದಲೇ ಇಲ್ಲಿಗೆ ಕಳುಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವುದಕ್ಕೂ, ದೊಡ್ಡ ಬರಗಾಲದಿಂದ ನಿಮ್ಮ ಪ್ರಾಣಗಳನ್ನು ಉಳಿಸುವುದಕ್ಕೂ ದೇವರು ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:7
8 ತಿಳಿವುಗಳ ಹೋಲಿಕೆ  

ಅವರು ಯಾವ ಮೋಶೆಯನ್ನು - ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರೆಂದು ಹೇಳಿ ಬೇಡವೆಂದರೋ ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ ಬಿಡುಗಡೆಮಾಡುವವನನ್ನಾಗಿಯೂ ನೇವಿುಸಿದನು.


ದೇವರೇ, ನೀನೇ ನನ್ನ ಅರಸನು; ಯಾಕೋಬವಂಶಕ್ಕೆ ಜಯಪ್ರದನಾಗು.


ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.


ಮತ್ತು ಅವನು ಬಹಳ ದಾಹವುಳ್ಳವನಾಗಿ ಯೆಹೋವನಿಗೆ - ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟು ಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ ಎಂದು ಮೊರೆಯಿಡಲು


ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವರಿಗೆ ಮಹಾ ಜಯವನ್ನುಂಟುಮಾಡಿದನು.


ನೀವು ನನ್ನನ್ನು ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.


ಆದರೆ ದೇವರು ಮೇಲಾಗಬೇಕೆಂದು ಸಂಕಲ್ಪಿಸಿದನು. ಈಗ ಅನುಭವಕ್ಕೆ ಬಂದ ಪ್ರಕಾರವೇ ಅನೇಕ ಪ್ರಾಣಿಗಳಿಗೆ ಸಂರಕ್ಷಣೆಯುಂಟಾಗುವಂತೆ ಮಾಡಿದನು.


ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು