Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:8 - ಕನ್ನಡ ಸತ್ಯವೇದವು J.V. (BSI)

8 ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ; ಆತನು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನನ್ನು ಇಲ್ಲಿಗೆ ಕಳಿಸಿದವರು ನೀವಲ್ಲ, ದೇವರೇ. ಅವರು ನನ್ನನ್ನು ಫರೋಹನಿಗೆ ಮಂತ್ರಿಯಾಗಿಯೂ ಅವರ ಆಸ್ಥಾನಕ್ಕೆ ಅಧಿಪತಿಯಾಗಿಯೂ ಈಜಿಪ್ಟ್ ದೇಶಕ್ಕೆ ಸರ್ವಾಧಿಕಾರಿಯಾಗಿಯೂ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನನ್ನು ಇಲ್ಲಿಗೆ ಕಳುಹಿಸಿದ್ದು ನಿಮ್ಮ ತಪ್ಪಲ್ಲ. ಅದು ದೇವರ ಯೋಜನೆ. ದೇವರು ನನ್ನನ್ನು ಫರೋಹನ ಅತ್ಯುನ್ನತವಾದ ಅಧಿಕಾರಿಯನ್ನಾಗಿ ಮಾಡಿದ್ದಾನೆ. ನಾನು ಅವನ ಮನೆಗೆಲ್ಲಾ ಮತ್ತು ಈಜಿಪ್ಟಿಗೆಲ್ಲಾ ರಾಜ್ಯಪಾಲನಾಗಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆದ್ದರಿಂದ ಈಗ ನೀವಲ್ಲ, ದೇವರು ತಾವೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ. ದೇವರು ನನ್ನನ್ನು ಫರೋಹನಿಗೆ ತಂದೆಯಾಗಿಯೂ, ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಈಜಿಪ್ಟ್ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:8
11 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.


ಆದದರಿಂದ ದೇವರ ದಯವು ಮನುಷ್ಯರಿಗೆ ಇಚ್ಫೈಸುವದರಿಂದಾಗಲಿ ಪ್ರಯತ್ನಿಸುವದರಿಂದಾಗಲಿ ದೊರೆಯದೆ ದೇವರು ಕರುಣಿಸುವದರಿಂದಲೇ ದೊರೆಯುತ್ತದೆ.


ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.


ದರಿದ್ರರಿಗೆ ತಂದೆಯಾಗಿ ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು,


ಮೀಕನು ಅವನಿಗೆ - ನೀನು ನಮ್ಮಲ್ಲಿರು; ನಮಗೆ ತಂದೆಯೂ ಯಾಜಕನೂ ಆಗು. ನಿನಗೆ ವರುಷಕ್ಕೆ ಹತ್ತು ರೂಪಾಯಿಗಳನ್ನೂ ಒಂದು ದುಸ್ತು ಬಟ್ಟೆಯನ್ನೂ ಆಹಾರವನ್ನೂ ಕೊಡುತ್ತೇನೆ ಅನ್ನಲು


ನೀವು ನನ್ನನ್ನು ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.


ಅವನು ಸ್ವಲ್ಪಕಾಲ ನಿನ್ನಿಂದ ಅಗಲಿಸಲ್ಪಟ್ಟದ್ದು ನಿರಂತರವೂ ನಿನ್ನವನಾಗಬೇಕೆಂಬದಕ್ಕೋಸ್ಕರವೋ ಏನೋ.


ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇವಿುನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗುವನು.


ಯೋಸೇಫನು ಇನ್ನೂ ಜೀವದಿಂದಿದ್ದಾನೆ; ಅವನು ಐಗುಪ್ತದೇಶದ ಸರ್ವಾಧಿಕಾರಿಯಾಗಿದ್ದಾನೆ ಎಂದು ತಿಳಿಸಲು ಅವನು ಸ್ತಬ್ಧನಾಗಿ ನಂಬಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು