ಆದಿಕಾಂಡ 46:1 - ಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣಮಾಡಿ ಬೇರ್ಷಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯಕೋಬನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣಮಾಡಿ ಬೇರ್ಷೆಬಕ್ಕೆ ಬಂದನು. ಅಲ್ಲಿ ತನ್ನ ತಂದೆ ಇಸಾಕನ ದೇವರಿಗೆ ಬಲಿದಾನಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆದ್ದರಿಂದ ಇಸ್ರೇಲನು ಈಜಿಪ್ಟಿಗೆ ಪ್ರಯಾಣ ಬೆಳೆಸಿದನು. ಅವನು ಬೇರ್ಷೆಬಕ್ಕೆ ಹೋಗಿ ತನ್ನ ತಂದೆಯಾದ ಇಸಾಕನ ದೇವರನ್ನು ಆರಾಧಿಸಿ ಯಜ್ಞಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಬೇರ್ಷೆಬಕ್ಕೆ ಬಂದು, ತನ್ನ ತಂದೆ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿ |
ಈಗ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ; ನನ್ನ ದಾಸನಾದ ಯೋಬನು ನಿಮ್ಮ ಪಕ್ಷವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ ಎಂದು ಹೇಳಿದನು.