Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:2 - ಕನ್ನಡ ಸತ್ಯವೇದವು J.V. (BSI)

2 ಅಲ್ಲಿ ದೇವರು ರಾತ್ರಿಯ ಸ್ವಪ್ನದಲ್ಲಿ ಇಸ್ರಾಯೇಲನನ್ನು - ಯಾಕೋಬನೇ, ಯಾಕೋಬನೇ ಎಂದು ಕರೆಯಲು, ಅವನು - ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ರಾತ್ರಿ ದೇವರು ಯಕೋಬನಿಗೆ ದರ್ಶನವಿತ್ತು, “ಯಕೋಬನೇ, ಯಕೋಬನೇ,” ಎಂದು ಕರೆಯಲು, ಅವನು, "ಇಗೋ, ಸಿದ್ಧನಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ರಾತ್ರಿ ದೇವರು ಕನಸಿನಲ್ಲಿ ಅವನೊಂದಿಗೆ ಮಾತನಾಡಿದನು. ದೇವರು ಅವನನ್ನು, “ಯಾಕೋಬನೇ, ಯಾಕೋಬನೇ” ಎಂದು ಕರೆದನು. ಅದಕ್ಕೆ ಇಸ್ರೇಲನು, “ಇಗೋ, ಇದ್ದೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, “ಯಾಕೋಬನೇ, ಯಾಕೋಬನೇ,” ಎಂದರು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:2
23 ತಿಳಿವುಗಳ ಹೋಲಿಕೆ  

ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ಅಲ್ಲಿ ರಾತ್ರಿಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು, ಏನಂದರೆ - ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು - ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು ಅವನನ್ನು ಬೇಡಿಕೊಳ್ಳುತ್ತಿದ್ದನು.


ಮಧ್ಯಾಹ್ನದ ಮೇಲೆ ಸುಮಾರು ಮೂರು ಗಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು - ಕೊರ್ನೇಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.


ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ - ಅನನೀಯನೇ, ಎಂದು ಅವನನ್ನು ಕರೆಯಲು ಅವನು - ಕರ್ತನೇ, ಇಗೋ, ಇದ್ದೇನೆ ಅಂದನು.


ಅವನು ನೆಲಕ್ಕೆ ಬಿದ್ದು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆ ಪಡಿಸುತ್ತೀ ಎಂದು ಹೇಳುವ ವಾಣಿಯನ್ನು ಕೇಳಿದನು.


ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು -


ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ ನನಗೆ


ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.


ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆ ಸಮುವೇಲನೇ, ಸಮುವೇಲನೇ ಅಂದನು. ಸಮುವೇಲನು - ಅಪ್ಪಣೆಯಾಗಲಿ, ನಿನ್ನ ದಾಸನು ಕಾದಿದ್ದಾನೆ ಎಂದನು.


ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು ಬಂದೆನೆಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ -


ದೇವರ ಮಾತುಗಳನ್ನು ಕೇಳುವವನಾಗಿಯೂ ಪರವಶವಾಗಿ ಕಣ್ಣು ತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಇರುವ ಪುರುಷನಿಗುಂಟಾದ ದೇವೋಕ್ತಿ.


ಅವರು ಬಂದಾಗ ಆತನು - ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಕಾಣಿಸಿಕೊಳ್ಳುವೆನು, ಇಲ್ಲವೆ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಆ ಕನಸಿನಲ್ಲಿ ದೇವದೂತನು - ಯಾಕೋಬನೇ ಎಂದು ಕರೆಯಲು ನಾನು - ಇದ್ದೇನೆ ಎಂದು ಹೇಳಿದಾಗ


ಕೈಚಾಚಿ ಕತ್ತಿಯನ್ನು ಹಿಡಿದುಕೊಳ್ಳಲು ಯೆಹೋವನ ದೂತನು ಆಕಾಶದೊಳಗಿಂದ - ಅಬ್ರಹಾಮನೇ, ಅಬ್ರಹಾಮನೇ ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು - ಇಗೋ, ಇದ್ದೇನೆ ಅಂದನು.


ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರಿಶೋಧಿಸಿದನು. ಹೇಗಂದರೆ ಆತನು ಅವನನ್ನು - ಅಬ್ರಹಾಮನೇ ಎಂದು ಕರೆಯಲು ಅವನು - ಇಗೋ, ಇದ್ದೇನೆ ಅಂದನು.


ಆಗ ಯೆಹೋವನು ಅವನಿಗೆ - ನೀನು ಚೆನ್ನಾಗಿ ತಿಳಿಯತಕ್ಕದ್ದೇನಂದರೆ - ನಿನ್ನ ಸಂತತಿಯವರು ಅನ್ಯದೇಶದಲ್ಲಿ ಕೆಲವು ಕಾಲವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರುಷ ಆ ದೇಶದವರಿಂದ ಬಾಧೆಪಡುವರು.


ಆಗ - ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಅವನಿಗೆ ಒಂದು ವಾಣಿ ಕೇಳಿಸಿತು.


ಆದರೆ ರಾತ್ರಿಯಲ್ಲಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು - ನೀನು ಆ ಸ್ತ್ರೀಯನ್ನು ಸೇರಿಸಿಕೊಂಡದರಿಂದ ಸಾಯತಕ್ಕವನಾಗಿದ್ದಿ; ಆಕೆ ಮುತ್ತೈದೆ ಅಂದನು.


ಆಗ ಯೆಹೋವನು ಗಿದ್ಯೋನನಿಗೆ - ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ವಿುದ್ಯಾನ್ಯರನ್ನು ಒಪ್ಪಿಸುವದು ನನಗೆ ಸರಿಯಾಗಿ ಕಾಣುವದಿಲ್ಲ; ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳ ಪಟ್ಟು ನನ್ನನ್ನು ಅಲಕ್ಷ್ಯಮಾಡಾರು.


ಅದೇ ದಿವಸ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.


ರಾತ್ರಿಯಲ್ಲಿ ನನಗೆ ದರ್ಶನವಾಯಿತು - ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳಿ ಕುದುರೆಗಳನ್ನು ಹತ್ತಿದವರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು