Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:28 - ಕನ್ನಡ ಸತ್ಯವೇದವು J.V. (BSI)

28 ಯಾಕೋಬನು ಗೋಷೆನ್‍ಸೀಮೆಯ ದಾರೀ ವಿಚಾರಿಸುವದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯಾಕೋಬನು ಗೋಷೆನ್ ಸೀಮೆಯ ದಾರಿಯನ್ನು ವಿಚಾರಿಸುವುದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಸೀಮೆಗೆ ಬಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಗೋಷೆನ್ ಪ್ರಾಂತದಲ್ಲಿ ಜೋಸೆಫ್ ತನ್ನನ್ನು ಭೇಟಿಯಾಗಬೇಕೆಂದು ತಿಳಿಸಲು ಯಕೋಬನು ಯೆಹೂದನನ್ನು ಮುಂದಾಗಿ ಜೋಸೆಫನ ಬಳಿಗೆ ಕಳಿಸಿದನು. ಅವರೆಲ್ಲರು ಗೋಷೆನ್ ಪ್ರಾಂತ್ಯವನ್ನು ಬಂದು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯಾಕೋಬನು ಮೊದಲು ಯೆಹೂದನನ್ನು ಯೋಸೇಫನ ಬಳಿಗೆ ಕಳುಹಿಸಿದನು. ಗೋಷೆನ್ ಪ್ರಾಂತ್ಯದಲ್ಲಿ ಯೆಹೂದನು ಯೋಸೇಫನ ಬಳಿಗೆ ಹೋದನು. ಆಮೇಲೆ ಯಾಕೋಬ ಮತ್ತು ಅವನ ಮಕ್ಕಳು ಆ ಪ್ರಾಂತ್ಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ ಗೋಷೆನ್ ಪ್ರಾಂತಕ್ಕೆ ಮಾರ್ಗವನ್ನು ತೋರಿಸುವಂತೆ ಯಾಕೋಬನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಪ್ರಾಂತಕ್ಕೆ ಬಂದು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:28
7 ತಿಳಿವುಗಳ ಹೋಲಿಕೆ  

ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು; ನೀನೂ ನಿನ್ನ ಮಕ್ಕಳೂ ಮೊಮ್ಮಕ್ಕಳೂ ಕುರಿ ದನ ಮೊದಲಾದ ಸ್ವಾಸ್ತ್ಯಸಹಿತರಾಗಿ ನನ್ನ ಬಳಿಯಲ್ಲೇ ಇರಬಹುದು;


ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು; ನಿನ್ನ ಸಹೋದರರು ನಿನಗೇ ಎರಗುವರು.


ನೀವು - ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಅನ್ನಿರಿ. ಪಶುಪಾಲಕರು ಐಗುಪ್ತ್ಯರಿಗೆ ಅಸಹ್ಯವಾಗಿರುವದರಿಂದ ಗೋಷೆನ್‍ಸೀಮೆಯನ್ನು ನಿಮ್ಮ ನಿವಾಸಕ್ಕೆ ನೇವಿುಸುವನು ಅಂದನು.


ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ - ನೀನೂ ನಾವೂ ನಮ್ಮ ಮಕ್ಕಳೂ ಎಲ್ಲರೂ ಸಾಯದೆ ಬದುಕಿಕೊಳ್ಳುವಂತೆ ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡಪ್ಪಾ; ನಾವು ಹೊರಟು ಹೋಗುವೆವು.


ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಓಡಿಹೋಗಿ ಯೂಫ್ರೇಟೀಸ್ ಮಹಾನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.


ಆಗ ಯೋಸೇಫನು ಫರೋಹನ ಬಳಿಗೆ ಹೋಗಿ - ನನ್ನ ತಂದೆಯೂ ಅಣ್ಣತಮ್ಮಂದಿರೂ ದನಕುರಿಗಳನ್ನೂ ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿದ್ದಾರೆಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು