ಆದಿಕಾಂಡ 46:29 - ಕನ್ನಡ ಸತ್ಯವೇದವು J.V. (BSI)29 ಅವರು ಗೋಷೆನ್‍ಸೀಮೆಗೆ ಬಂದಾಗ ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವದಕ್ಕೋಸ್ಕರ ಗೋಷೆನಿಗೆ ಹೋಗಿ ಅವನಿಗೆ ಕಾಣಿಸಿಕೊಂಡು ತಂದೆಯನ್ನು ಬಹಳ ಹೊತ್ತಿನವರೆಗೆ ಅಪ್ಪಿಕೊಂಡು ಅತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಜೋಸೆಫನು ರಥವನ್ನೇರಿ ತನ್ನ ತಂದೆ ಯಕೋಬನನ್ನು ಭೇಟಿಯಾಗಲು ಗೋಷೆನಿಗೆ ಬಂದನು. ತಂದೆಯನ್ನು ಕಂಡೊಡನೆ ಅವರ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತು ಅತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ತನ್ನ ತಂದೆಯು ಸಮೀಪಿಸುತ್ತಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ತಂದೆಯಾದ ಇಸ್ರೇಲನನ್ನು ಗೋಷೆನಿನಲ್ಲಿ ಭೇಟಿಯಾಗಲು ತನ್ನ ರಥವನ್ನು ಸಿದ್ಧಪಡಿಸಿಕೊಂಡು ಹೋದನು. ಯೋಸೇಫನು ತನ್ನ ತಂದೆಯನ್ನು ಕಂಡಾಗ ಅವನನ್ನು ಅಪ್ಪಿಕೊಂಡು ಬಹಳ ಹೊತ್ತಿನ ತನಕ ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು, ತನ್ನ ತಂದೆ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋದನು. ಯೋಸೇಫನು ತನ್ನ ತಂದೆಯನ್ನು ಸಂಧಿಸಿ, ಅಪ್ಪಿಕೊಂಡು, ಬಹಳ ಹೊತ್ತಿನವರೆಗೆ ಅತ್ತನು. ಅಧ್ಯಾಯವನ್ನು ನೋಡಿ |