Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:30 - ಕನ್ನಡ ಸತ್ಯವೇದವು J.V. (BSI)

30 ಇಸ್ರಾಯೇಲನು ಯೋಸೇಫನಿಗೆ - ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳುಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇಸ್ರಾಯೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ನೋಡಿ, ನೀನು ಇನ್ನೂ ಜೀವದಿಂದಿರುವುದನ್ನು ಕಂಡು ಸಂತೃಪ್ತನಾಗಿ ಸಾಯುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಕೋಬನು ಜೋಸೆಫನಿಗೆ, “ಇನ್ನು ನಾನು ಸಂತೃಪ್ತಿಯಾಗಿ ಸಾಯುವೆನು. ನೀನು ಇನ್ನೂ ಬದುಕಿರುವೆಯೆಂದು ಕೇಳಿದ್ದಾಯಿತು; ನಿನ್ನ ಮುಖವನ್ನು ಕಣ್ಣಾರೆ ನೋಡಿದ್ದಾಯಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆಗ ಇಸ್ರೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ಕಣ್ಣಾರೆ ಕಂಡದ್ದರಿಂದ ನೀನು ಬದುಕಿರುವುದು ನನಗೆ ನಿಶ್ಚಯವಾಯಿತು. ನಾನು ಈಗ ಸಮಾಧಾನದಿಂದ ಸಾಯವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಂಡಿದ್ದರಿಂದ ಇನ್ನು ನಾನು ಮರಣ ಹೊಂದಲು ಸಿದ್ಧನಾಗಿದ್ದೇನೆ. ನೀನು ಇನ್ನೂ ಜೀವದಿಂದ ಇದ್ದೀಯೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:30
4 ತಿಳಿವುಗಳ ಹೋಲಿಕೆ  

ಸಾಕು, ನನ್ನ ಮಗನಾದ ಯೋಸೇಫನು ಸಜೀವನಾಗಿದ್ದಾನೆ; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.


ಅವರು ಗೋಷೆನ್‍ಸೀಮೆಗೆ ಬಂದಾಗ ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವದಕ್ಕೋಸ್ಕರ ಗೋಷೆನಿಗೆ ಹೋಗಿ ಅವನಿಗೆ ಕಾಣಿಸಿಕೊಂಡು ತಂದೆಯನ್ನು ಬಹಳ ಹೊತ್ತಿನವರೆಗೆ ಅಪ್ಪಿಕೊಂಡು ಅತ್ತನು.


ಯೋಸೇಫನು ತನ್ನ ಅಣ್ಣ ತಮ್ಮಂದಿರಿಗೂ ತಂದೆಯ ಮನೆಯವರೆಲ್ಲರಿಗೂ - ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವರ್ತಮಾನವನ್ನು ತಿಳಿಸಿ - ಕಾನಾನ್‍ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು